ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ ಅವರು ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಕರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ಹೊನ್ನೂರಮ್ಮ ಅವರಿಗೆ 95 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಅವರು ಬಳ್ಳಾರಿಯ ಮನೆಗೆ ಹಿಂದಿರುಗಿದ್ದರು. ಹೊನ್ನೂರಮ್ಮ ಅವರ ನಿಧನವಾರ್ತೆಯನ್ನು ಸ್ವತಃ ಶ್ರೀರಾಮುಲು ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.
ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ ವಯೋಸಹಜ ಕಾರಣದಿಂದ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇನೆ.
ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಅಮ್ಮ, ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿದ್ದರು.pic.twitter.com/D94Lzg5Do6
— B Sriramulu (@sriramulubjp)August 21, 2020

ನಿಷೇಧಕ್ಕಿಲ್ಲ ನಿಶಾನೆ: ಸಾಕ್ಷ್ಯ ದೊರೆತರಷ್ಟೇ ಎಸ್​ಡಿಪಿಐ ವಿರುದ್ಧ ಕ್ರಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 15 =
Remember me
