ಬೆಂಗಳೂರು:ರಾಜ್ಯದ ಕೆಲವೆಡೆ ಮಳೆ ಸುರಿದರೂ 19 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಕಾಲ ಉಷ್ಣ ಅಲೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ಬೆಂಗಳೂರು ನಗರ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೀದರ್​, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಮೇ 9ರವರೆಗೆ ಬಿಸಿ ಗಾಳಿ ಬೀಸಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 4 ದಿನ ಕಾಲ ರಾತ್ರಿ ಬೆಚ್ಚಗಿನ ವಾತಾವರಣ ಕಾಣಿಸಿಕೊಳ್ಳಲಿದೆ. 8 ಜಿಲ್ಲೆಗಳಲ್ಲಿ ಉಷ್ಣಾಂಶ 40ರ ಗಡಿ ದಾಟಿದೆ. ಶನಿವಾರ ಕಲಬುರಗಿ, ರಾಯಚೂರಿನಲ್ಲಿ ತಲಾ 44 ಡಿ.ಸೆ.ತಾಪಮಾನ ದಾಖಲಾಗಿದೆ. ಕೊಪ್ಪಳ 43.5, ತುಮಕೂರು 41.9, ಬಾಗಲಕೋಟೆ 41.7, ವಿಜಯಪುರ 41.5, ಬೀದರ್​ 41 ಹಾಗೂ ಗದಗ 40.6 ಡಿ.ಸೆ. ಉಷ್ಣಾಂಶ ದಾಖಲಾಗಿದೆ.
ಅಂಬೇಡ್ಕರ್ ಜೀವನ ಓದಿಕೊಂಡವರು ಕಾಂಗ್ರೆಸ್ಸಿಗೆ ಮತ ಹಾಕುವುದಿಲ್ಲ: ಎನ್. ಮಹೇಶ
7ರಿಂದ ಮಳೆ ಸಾಧ್ಯತೆದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೇ 7ರಿಂದ ಮೇ 11ರವರೆಗೆ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದಲ್ಲಿ ಆಲಿಕಲ್ಲು ಮಳೆ ಬೀಳುವ ಸಾಧ್ಯತೆ ಇದೆ. ಅದೇರೀತಿ, ಮಳೆ ಜತೆಗೆ ಗಾಳಿಯ ವೇಗವೂ ಹೆಚ್ಚು ಇರಲಿದೆ. ಕೊಪ್ಪಳ, ರಾಯಚೂರು, ವಿಜಯಪುರ,ಯಾದಗಿರಿಯಲ್ಲಿ ಮುಂದಿನ 4 ದಿನ ಹಾಗೂ ಉಡುಪಿ, ದಕ್ಷಿಣ ಕನ್ನಡ,ಉತ್ತರ ಕನ್ನಡದಲ್ಲಿ ಮೇ 10ರಿಂದ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + seven =
Remember me
