ಬೆಂಗಳೂರು:ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆಯಾಗುತ್ತಿದೆ. ಬಿರು ಬೇಸಿಗೆಯಲ್ಲೂ ಕೆಲ ಜಿಲ್ಲೆಗಳಲ್ಲಿ ಮಳೆಯಾಗಿದೆ. ಈ ನಡುವೆ ಬಿಸಿಲಿನ ತಾಪಾಮನ ಏರಿಕೆಯಾಗುತ್ತಿದ್ದು, ದಿನ ಕಳೆದ ಹಾಗೆ ಬೆಂಗಳೂರಿನ ವಾತಾವರಣದಲ್ಲೂ ಬದಲಾವಣೆಯಾಗುತ್ತಿದೆ. ಇಂದು ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರದಲ್ಲಿ ಇಂದು ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದೆ. ಅಂತೆಯೇ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಂಗಳೂರು ಗ್ರಾಮಾಂತರ ಭಾಗದಲ್ಲಿ (ಏರ್​​ಪೋರ್ಟ್ ಸುತ್ತಮುತ್ತ) ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 22.6 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ:ಹುಬ್ಬಳ್ಳಿ | 5 ರೂ. ಕೇಳಿದ್ದೇ ತಪ್ಪಾಯ್ತು; ಸಿಟ್ಟಿನಲ್ಲಿ ಬಾಲಕನ ಜೀವ ತೆಗೆದ!
ರಾಜ್ಯದಲ್ಲಿ ಹೀಟ್‌ವೇವ್(ಶಾಖದ ಅಲೆ) ಆತಂಕ ಶುರುವಾಗಿದೆ. ಕಳೆದ ಶನಿವಾರ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ 38-39ರ ಅಸುಪಾಸಿನಲ್ಲಿ ಉಷ್ಣಾಂಶ ದಾಖಲಾದರೆ, ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ 34-36 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ರಾಜಧಾನಿ ಬೆಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್ ಇತ್ತು. ಬಿಸಿಲಿನ ಝಳಕ್ಕೆ ಜನರು ತತ್ತರಿಸಿದ್ದಾರೆ.
ಸದ್ಯ ಬೆಂಗಳೂರಿನ ತಾಪಮಾನ ಮುಂಬರುವ ತಿಂಗಳುಗಳಲ್ಲಿ ಇನ್ನಷ್ಟು ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ವಾಯುವ್ಯ ಮತ್ತು ಪರ್ಯಾಯ ದ್ವೀಪ ಪ್ರದೇಶಗಳನ್ನು ಹೊರತುಪಡಿಸಿದರೆ ಭಾರತದ ಬಹುತೇಕ ಪ್ರದೇಶಗಳಲ್ಲಿ ಏಪ್ರಿಲ್​ನಿಂದ ಜೂನ್ ತಿಂಗಳ ಅಂತ್ಯದ ವರೆಗೆ ಹೆಚ್ಚಿನ ತಾಪಮಾನ ವರದಿಯಾಗುವ ನಿರೀಕ್ಷೆ ಇರಲಿದೆ.
ಉತ್ತರದಿಂದ ದಕ್ಷಿಣದತ್ತ ಬಿಸಿ ಗಾಳಿ ಬೀಸುತ್ತಿರುವುದು, ವಾತಾವರಣದಲ್ಲಿ ತೇವಾಂಶ ಇಲ್ಲದಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿಧಾನವಾಗಿ ಉಷ್ಣಾಂಶ ಏರಿಕೆಯಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿದೆ. ಜನರು ಆರೋಗ್ಯದ ಮೇಲೆ ಹೆಚ್ಚು ಗಮನಹರಿಸಬೇಕು. ತಾಪಮಾನ ಹೆಚ್ಚಾದಂತೆ ಜನರಿಗೆ ಊತ, ತಲೆನೋವು, ವಾಕರಿಕೆ, ನಿರ್ಜಲೀಕರಣ, ಸುಸ್ತು, ವಾಂತಿ ಮತ್ತು ಬೆವರು ಸೇರಿ ಇತರೆ ಆರೋಗ್ಯ ಸಮಸ್ಯೆಗಳು ಕಾಡಲಿವೆ. ಜತೆಗೆ, ಜ್ವರ (102 ಡಿಗ್ರಿ) ಕಾಣಿಸಿಕೊಳ್ಳಬಹುದು. ತೀವ್ರವಾದ ಜ್ವರ (104 ಡಿಗ್ರಿ) ಬಂದರೆ ಪ್ರಜ್ಞೆ ಬೀಳುವ ಅಪಾಯ ಜತೆಗೆ ಕೋಮಾಕ್ಕೂ ಹೋಗಬಹುದು. ಆದ್ದರಿಂದ, ಬಿಸಿಲಿನಲ್ಲಿ ಹೆಚ್ಚು ಓಡಾಡಬಾರದು ಎನ್ನುತ್ತಾರೆ ವೈದ್ಯರು.
ಇದನ್ನೂ ಓದಿ:VIDEO | ಪಿಸ್ತೂಲ್ ಬಳಸಿ ಕೇಕ್ ಕಟ್ ಮಾಡಿದ ಯುವಕ ಪೊಲೀಸರಿಂದ ಬಂಧನದ ಗಿಫ್ಟ್!
ಮನೆ ಇಲ್ಲದೆ ಬೀದಿಯಲ್ಲಿ ಮಲಗುವ ನಿರಾಶ್ರಿತರು, ಆಟೋ ಚಾಲಕರು, ಸಂಚಾರ ಪೊಲೀಸರು, ರೈತರು, ಕಟ್ಟಡ ಮತ್ತು ರಸ್ತೆ ನಿರ್ಮಾಣ ಕಾರ್ಮಿಕರು ಬಿರು ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಕೆಲಸ ಮಾಡಬಾರದು. ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬಿಸಿಲಿನ ಪ್ರಖರತೆ ಹೆಚ್ಚಿರುತ್ತದೆ. ಇಂಥ ಸಂದರ್ಭದಲ್ಲಿ ಕೆಲಸ ಮಾಡಬಾರದು. ವಿಶೇಷವಾಗಿ ನಿರ್ಮಾಣ ಹಂತದ ಕಾಮಗಾರಿಗಳನ್ನು ನಡೆಸಕೊಡದು. ಬಿಸಿಲು ಲೆಕ್ಕಿಸದೆ ದಿನವಿಡೀ ಕೆಲಸ ಮಾಡಿದರೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಜತೆಗೆ ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:4 × 5 =
Remember me
