ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಪ್ರಖರತೆ ಮುಂದುವರಿದಿದ್ದು, ಇನ್ನೂ ನಾಲ್ಕು ದಿನ ಬಿಸಿ ಗಾಳಿಯದ್ದೇ ಆರ್ಭಟವಿರುತ್ತದ. ಈ ಮಧ್ಯೆ ಗುರುವಾರ ರಾಜಧಾನಿ ಬೆಂಗಳೂರಿನಲ್ಲಿ ಈ ವರ್ಷದ ಮೊದಲ ಮಳೆಯಾಗಿದ್ದು, ನಾಗರಿಕರ ಮೊಗದಲ್ಲಿ ಹರ್ಷ ಮೂಡಿಸಿತು.
ಕಳೆದೊಂದು ವಾರದಿಂದ ಉತ್ತರ ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ. ಸೆಲ್ಸಿಯಸ್ ದಾಟಿದೆ. ಶಾಖ ಅಲೆ ಇನ್ನಷ್ಟು ದಿನಗಳ ಮುಂದುವರಿಯುವ ಹಿನ್ನೆಲೆಯಲ್ಲಿ ಒಣ ಹವೆ ಕಾಣಲಾಗುತ್ತಿದೆ. ಇದರಿಂದ ಮಳೆಯಾಗುವ ಸಾಧ್ಯತೆ ಕ್ಷೀಣಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಶಾಖ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಲೋಕಸಭಾ ಚುನಾವಣೆ ನಡೆಯುತ್ತಿರುವ 16 ಜಿಲ್ಲೆಗಳಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಿರುವ ಕಾರಣ ಮತದಾನದ ದಿನವಾದ ಮೇ 7ರಂದು ಮತಗಟ್ಟೆ ಕೇಂದ್ರಗಳಲ್ಲಿ ಮತದಾರರಿಗೆ ಬಿಸಿಲಿನಿಂದ ರಕ್ಷಣೆ ನೀಡುವಂತಹ ವ್ಯವಸ್ಥೆ ಮಾಡುವಂತೆ ಆಯೋಗವು ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದೆ.
ದಕ್ಷಿಣ ಜಿಲ್ಲೆಗಳಲ್ಲಿ ಮಳೆ:
ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವೆಡೆ ಗುರುವಾರ ಸಾಧಾರಣ ಪ್ರಮಾಣದ ಮಳೆಯಾಗಿದೆ. ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ಬಿಬಿಎಂಪಿ ವ್ಯಾಪ್ತಿಯ ಕೆಲವೆಡೆ ವರ್ಷಧಾರೆಯಾಗಿದೆ. ಈ ವಾರಾಂತ್ಯದವರೆಗೂ ದಕ್ಷಿಣಕನ್ನಡ, ಉಡುಪಿ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಕೆಲವೆಡೆ ಹಗುರದಿಂದ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರು ಸಿಟಿಯಲ್ಲಿ ಗುಡುಗು-ಮಿಂಚು ಸಹಿತ ಅಲ್ಪ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ಗರಿಷ್ಠ ಉಷ್ಣಾಂಶ ಕಂಡ ಜಿಲ್ಲೆಗಳು:ಕಲಬುರಗಿ – 43.5 ಡಿ. ಸೆ.ರಾಯಚೂರು – 43.4 ಡಿ. ಸೆ.ಕೊಪ್ಪಳ – 42.4 ಡಿ. ಸೆ.ಬಾಗಲಕೋಟೆ – 41.6 ಡಿ. ಸೆ.ಹಾವೇರಿ – 40.4 ಡಿ. ಸೆ.ಬೀದರ್ – 40 ಡಿ. ಸೆ.ಮಂಡ್ಯ – 40 ಡಿ. ಸೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
