ಚಿಕ್ಕಮಗಳೂರು:ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ರಸ್ತೆ ಕಾಣಿಸದಷ್ಟು ದಟ್ಟವಾಗಿ ಮಂಜು ಆವರಿಸಿದ್ದು, ಇದೇ ಕಾರಣಕ್ಕೆ ಎರಡು ಅಪಘಾತಗಳು ಸಂಭವಿಸಿವೆ. ಒಂದು ಆ್ಯಕ್ಸಿಡೆಂಟ್​ನಲ್ಲಿ ವಾಹನ ಪಲ್ಟಿಯಾದರೆ, ಇನ್ನೊಂದು ಅಪಘಾತ ಪ್ರಪಾತದ ಬಳಿಯೇ ಸಂಭವಿಸಿದೆ.
ಸುಮಾರು 19 ಕಿ.ಮೀ. ವ್ಯಾಪ್ತಿಯ ಚಾರ್ಮಾಡಿಯಲ್ಲಿ ತುಂತುರು ಮಳೆ ಜೊತೆಗೆ ಮಂಜು ಕೂಡ ಕವಿದಿದೆ. ಹೀಗಾಗಿ ರಸ್ತೆ ಕಾಣಿಸದ್ದರಿಂದ ಸವಾರರು ವಾಹನ ಚಲಾಯಿಸಲು ಪ್ರಯಾಸ ಪಡುವಂತಾಗಿದೆ. ಮೂಡಿಗೆರೆ ತಾಲೂಕಿನ ಬಿದಿರುತಳ ಬಳಿ ತಡೆಗೋಡೆಗೆ ಡಿಕ್ಕಿ ಹೊಡೆದ ಬೊಲೆರೊ ವಾಹನ ಪಲ್ಟಿಯಾಗಿದೆ.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಇನ್ನೊಂದು ಅಪಘಾತದಲ್ಲಿ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಬಸ್​-ಕಾರು ಡಿಕ್ಕಿಯಾಗಿದೆ. ಇವೆರಡರ ಡಿಕ್ಕಿಯ ರಭಸಕ್ಕೆ ತಡೆಗೋಡೆ ಕುಸಿದುಬಿದ್ದಿದೆ. ಮಾತ್ರವಲ್ಲ, ಪ್ರಪಾತದ ಬಳಿಯೇ ಈ ಅಪಘಾತ ಸಂಭವಿಸಿದ್ದು, ಭಾರಿ ಅನಾಹುತ ಸ್ವಲ್ಪದರಲ್ಲಿ ತಪ್ಪಿದೆ. ತಕ್ಷಣ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
‘ಡಾಕ್ಟರ್​ ಬ್ರೋ’ ಈಗ ಮ್ಯಾನ್ ಆಫ್ ಮಿಲಿಯನ್ಸ್​; ಯೂ-ಟ್ಯೂಬ್​ ಒಂದರಲ್ಲೇ 2 ಮಿಲಿಯನ್​ ಸಬ್​​ಸ್ಕ್ರೈಬರ್ಸ್​!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
