ಬೆಂಗಳೂರು:ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕು ಹಿನ್ನೆಲೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಇದೀಗ ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು: ಕಾಂಗ್ರೆಸ್​​
ಕರಾವಳಿ, ದಕ್ಷಿಣ ಒಳನಾಡಿಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಇಂದಿನಿಂದ 4 ದಿನ ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಹೆಚ್ಚಿದೆ. 4 ದಿನಗಳ ಕಾಲ ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಕೆಲ ಭಾಗಗಳಿಗೆ ಇಂದಿನಿಂದ 4 ದಿನ ಉಡುಪಿ, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ದಕ್ಷಿಣ ಒಳನಾಡಿನ ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಕೊಡುಗು, ಶಿವಮೊಗ್ಗ ಜಿಲ್ಲೆಗಳಿಗೆ ಇಂದು ಯಲ್ಲೋ ಮತ್ತು ಮುಂದಿನ 3 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ:ಬಿಜಾಪುರದಲ್ಲಿ ಗೋಳಗುಮ್ಮಟ ಎಷ್ಟು ಮುಖ್ಯವೋ ಫ.ಗು.ಹಳಕಟ್ಟಿ ಎಂಬ ವಚನಗುಮ್ಮಟವೂ ಅಷ್ಟೇ ಮುಖ್ಯ !
ಬೆಂಗಳೂರಿಗೆ ಇಂದು ಕೂಡ ಸಾಧಾರಣ ಮಳೆಯಾಗಲಿದ್ದು, ನಗರದಲ್ಲಿ ಮೋಡ ಕವಿದ ವಾತಾವರಣ ಎಂದಿನಂತೆ ಮುಂದುವರೆಯಲಿದೆ. ಉಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 2 =
Remember me
