ಬೆಂಗಳೂರು:ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದೆ. ಶನಿವಾರವೂ ವಿವಿಧೆಡೆ ಭಾರಿ ಮಳೆ ಬಿದ್ದಿದೆ. ಬಾಗಲಕೋಟೆಯ ಇಲಕಲ್​, ಬೆಂ.ಗ್ರಾಮಾಂತರದ ದೊಡ್ಡಬಳ್ಳಾಪುರ, ಬೀದರ್​ನ ಔರದ್​, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡದ ಮಂಗಳೂರು, ಉತ್ತರ ಕನ್ನಡದ ಗೆರಸೊಪ್ಪ, ಕೊಡಗಿನ ಗೋಣಿಕೊಪ್ಪ, ಶಿವಮೊಗ್ಗದ ಆಗುಂಬೆ ಹಾಗೂ ರಾಮನಗರದಲ್ಲಿ ಭರ್ಜರಿ ವರ್ಷಧಾರೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗಿನಲ್ಲಿ ಜೂ 23ರಿಂದ ಜೂ 25ರವರೆಗೆ ಅತಿ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್​ ​ ಅಲರ್ಟ್ ಘೋಷಿಸಿದೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮುಂದಿನ ಮೂರು ದಿನ ಆರೆಂಜ್​ ಅರ್ಲಟ್​ ಇದ್ದರೆ, ಮೈಸೂರು, ಬೀದರ್​ನಲ್ಲಿ ಜೂ 23, ಜೂ 24ರಂದು ಯೆಲ್ಲೋ ಅರ್ಲಟ್​ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವರ್ಷಧಾರೆಯಾಗಲಿದೆ.
ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಅವಧಿಯ ಕುತಂತ್ರದ ಬಗ್ಗೆ ಸತ್ಯ ಬಿಚ್ಚಿಟ್ಟ ಎಚ್​ಡಿಕೆ
ಹವಾಮಾನ ಇಲಾಖೆ ಹಿರಿಯ ಅಧಿಕಾರಿ ಸಿ.ಎಸ್​.ಪಾಟೀಲ್​ ಮಾತನಾಡಿ, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೆ ಸುಳಿಗಾಳಿ ಹಾಗೂ ಪೂರ್ವ ಅರಬ್ಬಿ ಸಮುದ್ರದಲ್ಲಿ ಮೋಡ ಕವಿದ ವಾತಾವರಣ ಇರುವ ಕಾರಣದಿಂದಾಗಿ ರಾಜ್ಯದಲ್ಲೆಡೆ ಉತ್ತಮ ಮಳೆ ಬೀಳುತ್ತಿದೆ. ಕೆಲ ಜಿಲ್ಲೆಗಳಲ್ಲಿ ಮಳೆಯ ಜತೆಗೆ ಗುಡುಗು ಮಿಂಚು ಇರಲಿದ್ದು, ಗಾಳಿಯ ವೇಗವೂ ಜಾಸ್ತಿಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ಪ್ರತಿ ಗಂಟೆಗೆ 45-55 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ಜೂ 23ರಿಂದ ಜೂ 26ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಮುಂದಿನ ದಿನಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ ಎಂದರು. ಬೆಂಗಳೂರಿನಲ್ಲಿ ಮುಂದಿನ 4 ದಿನ ಭಾಗಶ@ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದೆ. ಕೆಲವೊಮ್ಮೆ ಮೇಲ್ಮೆ ಗಾಳಿ ಪ್ರಬಲವಾಗಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವೂ ಕ್ರಮವಾಗಿ 31 ಡಿ.ಸೆ. ಹಾಗೂ 21 ಡಿ.ಸೆ. ಇರಲಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:thirteen + 12 =
Remember me
