ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶ ಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18ರಿಂದ ಇನ್ನಷ್ಟು ಚುರುಕಾಗಲಿದೆ.
ಭಾನುವಾರವೂ ಹಲವು ಜಿಲ್ಲೆಗಳಲ್ಲಿ ವರ್ಷಧಾರೆಯಾಗಿದ್ದು, ಬಾಗಲಕೋಟೆಯಲ್ಲಿ 87 ಮಿಮೀ, ಕೋಲಾರದ ಟಮಕಾದಲ್ಲಿ 77 ಮಿಮೀ, ಮೈಸೂರಿನ ಸುತ್ತೂರಿನಲ್ಲಿ 21 ಮಿಮೀ ಮಳೆ ಬಿದ್ದಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಅಲ್ಲದೆ, ಮೇ,18,19ರಂದು ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ೋಷಿಸಲಾಗಿದೆ.
ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆಯಲ್ಲಿ ಮುಂದಿನ 4 ದಿನ, ಬೀದರ್,ವಿಜಯಪುರ, ರಾಯಚೂರು, ಕಲಬುರಗಿ, ರಾದಗಿರಿ, ಕೊಪ್ಪಳ,ಗದಗ, ಹಾವೇರಿ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಕೇರಳದಲ್ಲಿ 24 ಗಂಟೆಯೊಳಗೆ ಸುರಿದ ದಾಖಲೆಯ ಮಳೆ: ಮೇ 31ರವರೆಗೆ ಭಾರೀ ಮಳೆ, ಮುನ್ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 7 =
Remember me
