ಬೆಂಗಳೂರು:ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಮುಂದುವರಿದಿದ್ದು, ಜು.23ರಿಂದ 2 ದಿನ ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರದಲ್ಲಿ ಜು.26ರಂದು ಹಾಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಜು.26ರಿಂದ 2 ದಿನ ಯೆಲ್ಲೋ ಅಲರ್ಟ್ ಇರಲಿದೆ. ಮುಂದಿನ 2 ದಿನ ರಾಜ್ಯದಲ್ಲಿ ಮಳೆ ಪ್ರಮಾಣ ತಗ್ಗಲಿಸಡ. ಆದರೆ, ಈ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು. ಕರಾವಳಿಯಲ್ಲಿ ಮಳೆ ಕ್ಷೀಣವಾಗಿರುವುದರಿಂದ ಬಿಸಿಲ ವಾತಾವರಣ ಕಾಣಿಸಿದೆ. ಸತತ ಮೂರು ದಿನಗಳಿಂದ ಮಳೆ ದೂರವಾಗಿದ್ದು, ಮಂಗಳವಾರವೂ ಒಂದೆರಡು ಸಾಮಾನ್ಯ ಮಳೆ ಮಾತ್ರ ಸುರಿದಿದೆ.
ವೃದ್ಧೆ ಸಾವು, ಬಾಲಕಿ ಪಾರು
ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಕಂದಕೂರ ಗ್ರಾಮದಲ್ಲಿ ಧಾರಾಕಾರ ಮಳೆಯಿಂದ ಮನೆ ಗೋಡೆ ಕುಸಿದಿದ್ದು,. ಬಟ್ಟೆ ತೊಳೆಯುತ್ತಿದ್ದ ಸಾವಿತ್ರಮ್ಮ (69) ಮೃತಪಟ್ಟಿದ್ದಾಳೆ. ನರಗುಂದ ಪಟ್ಟಣದಲ್ಲಿ ಸೋಮವಾರ ಭೂಕುಸಿತ ಸಂಭವಿಸಿದ್ದು, 14 ವರ್ಷದ ಬಾಲಕಿ ಕಾವ್ಯಾ ನಿಂಗಪ್ಪ ಹೂಲಿ (ನುಗ್ಗಾನಟ್ಟಿ) ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಏಕಾಏಕಿ ಭೂಮಿ ಅದುರಿದಂತಾಗಿ ಭೂಕುಸಿತ ಸಂಭವಿಸಿತು. ಮನೆ ಛಾವಣಿ ಸಂಪೂರ್ಣ ಕುಸಿದು ಬಿತ್ತು. ಅವಶೇಷಗಳಡಿ ಕಾವ್ಯಾ ಸಿಲುಕಿ ನರಳಾಡುತ್ತಿದ್ದಳು. ಜತೆಯಲ್ಲಿದ್ದ ಸಹೋದರ ಈರಪ್ಪನ ತಲೆಗೂ ಬಲವಾದ ಪೆಟ್ಟು ಬಿದ್ದಿದ್ದು, ಚೀರಾಡುತ್ತ ಹೊರಗೆ ಬಂದಿದ್ದಾನೆ. ಅಕ್ಕ-ಪಕ್ಕದ ಮನೆಯವರಿಗೆ ಅವಶೇಷಗಳಡಿ ಸಿಲುಕಿದ್ದ ಬಾಲಕಿಯನ್ನು ರಕ್ಷಿಸಿದ್ದು, ತಲೆ ಮತ್ತು ಕೈ-ಕಾಲುಗಳಿಗೆ ಗಂಭೀರ ಗಾಯಗಳಾಗಿವೆ.
ಹಣ ಗಳಿಕೆಗಾಗಿ ಕೊವಿಡ್​-19 ರೋಗಿಗಳ ಪ್ರಾಣದ ಜತೆ ಚೆಲ್ಲಾಟವಾಡಿದ ಐದು ಮಂದಿಯ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 20 =
Remember me
