ಬೆಂಗಳೂರು:ನಗರದ ಹಲವೆಡೆ  ಸಂಜೆ ವೇಳೆಗೆ ಗುಡುಗು ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧೆಡೆ ತಾಪಮಾನ ಹೆಚ್ಚಾಗಿ ಸೆಖೆಯಿಂದ ಜನರು ಪರಿತಪಿಸುತ್ತಿದ್ದರು. ಇಂದು ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಿದ್ದು, ಜನರಿಗೆ ತುಸು ಕೂಲ್‌ ಕೂಲ್‌ ಅನುಭವವಾಗಿದೆ.
ಇದನ್ನೂ ಓದಿ: ಬಿಕಿನಿ ತೊಟ್ಟು ಕ್ಯಾಮೆರಾಗೆ ಪೋಸ್​ ನೀಡಿದ ನಟಿ, ನಿರೂಪಕಿ ಅನಸೂಯ! ಫೋಟೋಗಳು ವೈರಲ್​
ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ ಗುಡುಗು, ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ವಿವಿಧ ಕಡೆ ಮರಗಳು ಉರುಳಿ ಬಿದ್ದು, ವಾಹನ ಸಂಚಾರ ಏರುಪೇರಾಗಿದೆ. ಮಲ್ಲೇಶ್ವರಂ, ಚಾಮರಾಜಪೇಟೆ, ಕಾರ್ಪೊರೇಷನ್, ವಿಧಾನಸೌದ, ಮೆಜೆಸ್ಟಿಕ್ ಸೇರಿದಂತೆ ವಿವಿಧೆಡೆ ಧಾರಕಾರ ಮಳೆಯಾಗಿದೆ.
ಗುಡುಗು ಮತ್ತು ಗಾಳಿ ಸಹಿತ ಮಳೆಗೆ ಬೆಂಗಳೂರಿಗರು ಬೆಚ್ಚಿ ಬಿದ್ದಿದ್ದಾರೆ. ನಿನ್ನೆ ರೀತಿಯೇ ಬೃಹತ್ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಗೆ ಇಂದು ಸಹ ನಗರದಲ್ಲಿ ಭಾರೀ ಅವಾಂತರ ಸೃಷ್ಟಿ ಆಗುವ ಸಾಧ್ಯತೆ ಇದೆ. ವರುಣನ ಆರ್ಭಟಕ್ಕೆ ವಾಹನ ಸವಾರರ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂದು ನಡೆಯುವ RCB ಪಂದ್ಯಕ್ಕೂ ಮಳೆ ಅಡ್ಡಿ ಆಗುವ ಸಾಧ್ಯತೆ ಎನ್ನಲಾಗುತ್ತಿದೆ.
ಮುಂದಿನ 24 ಗಂಟೆಯೂ ರಾಜ್ಯದ ವಿವಿಧೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆ ಮತ್ತು ಉತ್ತರ ಒಳನಾಡು, ಕರಾವಳಿಯ ಕೆಲವು ಕಡೆ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಸಿಲಿಗೆ ಕಪ್ಪಾದ ಕಾಲು ಪಳ ಪಳ ಅಂತಾ ಹೊಳೆಯ ಬೇಕಾ? ಈ ಮನೆ ಮದ್ದುಗಳನ್ನು ಬಳಸಿ



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
