ಬೆಂಗಳೂರು:ರಾಜ್ಯದ ಕರಾವಳಿ, ಮಲೆನಾಡು ಸೇರಿ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದೊಡ್ಡಾಣೆಯಲ್ಲಿ ಶನಿವಾರ ಸಂಜೆ ಸಿಡಿಲಿಗೆ ಯುವಕನೊಬ್ಬ ಬಲಿಯಾಗಿದ್ದಾನೆ. ಗ್ರಾಮದ ಮಹದೇವಸ್ವಾಮಿ (19) ಮೃತ. ತೋಟದ ಮನೆಯಲ್ಲಿ ವಾಸವಿದ್ದ ಮಹದೇವ ಸ್ವಾಮಿ ಸಂಜೆ 4.30ರಲ್ಲಿ ಮನೆಯಿಂದ ಹೊರ ಬಂದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ.
ಕರಾವಳಿಯಲ್ಲಿ ಆರ್ಭಟ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಕಾರವಾರ ತಾಲೂಕಿನಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ತಗ್ಗು ಪ್ರದೇಶಗಳು, ಹಲವು ರಸ್ತೆಗಳು ಜಲಾವೃತವಾಗಿವೆ. ರಸ್ತೆಯಲ್ಲಿ ನೀರು ತುಂಬಿಕೊಂಡು ವಾಹನ, ಜನ ಸಂಚಾರಕ್ಕೆ ಅಡಚಣೆ ಉಂಟಾಯಿತು. ದೇವಳಮಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಹಳೆಯ ಮಣ್ಣಿನ ಗೋಡೆ ಭಾರಿ ಮಳೆಗೆ ಕುಸಿದು ಬಿದ್ದಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶನಿವಾರವೂ ಮಳೆ ಮುಂದುವರಿದಿದೆ.
ಕೊಡಗಿನಲ್ಲಿ ಕ್ಷೀಣ:ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಶನಿವಾರ ಕಡಿಮೆಯಾಗಿದೆ. ಮೂರು ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿದ ಪರಿಣಾಮ ನದಿ, ತೊರೆಗಳು ತುಂಬಿ ಹರಿದಿದ್ದು, ಹಾರಂಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿದೆ. ಶನಿವಾರವೂ 5 ಸಾವಿರ ಕ್ಯೂಸೆಕ್​ನಷ್ಟು ನೀರು ಜಲಾಶಯಕ್ಕೆ ಬರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ನದಿಗೆ 4104 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ.
ನದಿಗಳಿಗೆ ಹರಿವು ಏರಿಕೆ:ಮಲೆನಾಡಿನಲ್ಲಿ ಶನಿವಾರವೂ ವರುಣನ ಅಬ್ಬರ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿಯ ಘಟ್ಟ ಪ್ರದೇಶ ಹಾಗೂ ಶರಾವತಿ ನದಿ ಕಣಿವೆ ಪ್ರದೇಶದಲ್ಲಿ ಮಳೆಯಾಗಿದೆ. ಕಳೆದ ಎರಡ್ಮೂರು ದಿನಗಳಿಂದ ಮಳೆ ಚುರುಕಾಗಿದ್ದರಿಂದ ನದಿಗಳ ಹರಿವಿನಲ್ಲಿ ಏರಿಕೆ ಕಂಡಿದೆ. ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿದೆ.
ಕರೊನಾಕ್ಕೆ ನಾವೇಕೆ ಹೆದರಬೇಕಿಲ್ಲ; ಸೆಪ್ಟಂಬರ್​ವರೆಗೆ ಹೇಗಿರಲಿದೆ ಪರಿಸ್ಥಿತಿ?

0
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 18 =
Remember me
