ಬೆಂಗಳೂರು:ನಾಲ್ಕೈದು ದಿನಗಳಿಂದ ದುರ್ಬಲವಾಗಿದ್ದ ಮುಂಗಾರು ಗುರುವಾರದಿಂದ ಚುರುಕಾಗಿರುವ ಕಾರಣ ರಾಜ್ಯದಲ್ಲೆಡೆ ಮಳೆ ಅಬ್ಬರಿಸುತ್ತಿದೆ.ಚಿಕ್ಕಮಗಳೂರಿನ ಮೂಡಗೆರೆ, ಕೊಡಗಿನ ಗೋಣಿಕೊಪ್ಪ, ಶಿವಮೊಗ್ಗದ ಆಗುಂಬೆ, ದಕ್ಷಿಣ ಕನ್ನಡದ ಮಂಗಳೂರು ಮತ್ತು ಬೆಂಗಳೂರು ಸೇರಿ ರಾಜ್ಯದ ಹಲವು ಪ್ರದೇಶಗಳಲ್ಲಿ ಧಾರಾಕಾರವಾಗಿ ಮಳೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ 23ರಿಂದ ಮುಂದಿನ ಎರಡು ದಿನ ಹಾಗೂ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಮೈಸೂರಿನಲ್ಲಿ ಜೂ 24 ಅತಿ ಭಾರಿ ಮಳೆ ಬೀಳುವ ಹಿನ್ನೆಲೆಯಲ್ಲಿ ರೆಡ್​ ಅಲರ್ಟ್​ ನೀಡಲಾಗಿದೆ. ಈ ಸಂದರ್ಭದಲ್ಲಿ ಒಂದೇ ದಿನದಲ್ಲಿ 204 ಮಿಮೀವರೆಗೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಾಸನದಲ್ಲಿ ಜೂ 23ರಿಂದ ಮುಂದಿನ ಎರಡು ದಿನ, ಚಾಮರಾಜನಗರ, ದಾವಣಗೆರೆ ಜೂ 24ರಂದು, ಬೆಳಗಾವಿ, ಧಾರವಾಡ ಹಾಗೂ ಹಾವೇರಿಯಲ್ಲಿ ಜೂ 24, ಜೂ 25ರಂದು ಆರೆಂಜ್​ ಅಲರ್ಟ್ ನೀಡಲಾಗಿದೆ.
ಲ್ಯಾಪ್‌ಟಾಪ್ ಸ್ಫೋಟಗೊಂಡು ಇಬ್ಬರು ಮಕ್ಕಳು ಮೃತ್ಯು!
ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಜೂ 23ರಿಂದ ಈ ಎರಡು ಭಾಗದಲ್ಲಿ ಮುಂಗಾರು ಚುರುಕಾಗಲಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
