ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 3 ದಿನ ಮುಂದುವರಿಯಲಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಮುಂದಿನ 72 ಗಂಟೆ ಕಾಲ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ಹವಾಮಾನ ತಿಳಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಮುಂದಿನ 48 ಗಂಟೆ ಹಾಗೂ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು ಮತ್ತು ಹಾಸನದಲ್ಲಿ ಅ.25ರಂದು ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಅ.28ರಿಂದ ಹಿಂಗಾರು ಮಳೆ: ಅ.28ರಿಂದ ಹಿಂಗಾರು ಮಳೆ ಆರಂಭವಾಗಲಿದ್ದು, ಡಿ.31ರವರೆಗೆ ಮುಂದುವರಿಯಲಿದೆ. ಡಿಸೆಂಬರ್ ಮೊದಲ ವಾರದಲ್ಲಿ ಚಂಡಮಾರುತ ಆಗುವ ಸಾಧ್ಯತೆ ಇದ್ದು, ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಸಾಮಾನ್ಯವಾಗಿ ನವೆಂಬರ್ ಮೊದಲ ವಾರದಲ್ಲಿ ಹಿಂಗಾರು ಮಳೆ ಶುರುವಾಗುತ್ತಿತ್ತು. ಆದರೆ, ಈ ಬಾರಿ ಬೇಗ ಆರಂಭವಾಗಿದೆ. ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ಮುಗಿದಿದ್ದರೂ ಮಳೆ ಅಬ್ಬರವೂ ಇನ್ನೂ ನಿಂತಿಲ್ಲ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದ್ದಾರೆ.
ಒಟ್ಟಾರೆ ರಾಜ್ಯಾದ್ಯಂತ ಕಳೆದು ಹದಿನೈದು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆ, ನವರಾತ್ರಿ ಸಂಭ್ರಮಕ್ಕೂ ಅಡ್ಡಿ ಮಾಡಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ವರುಣನ ಅಬ್ಬರಕ್ಕೆಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇದೀಗ ಕರೊನಾ ಆತಂಕದಲ್ಲೂ ನವರಾತ್ರಿಯನ್ನು ಸರಳವಾಗಿಯಾದರೂ ಆಚರಿಸಲು ಸಿದ್ಧಗೊಂಡ ಜನರಿಗೆ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ ಕಾಡುತ್ತಿದೆ. ಆಯುಧಪೂಜೆ-ವಿಜಯದಶಮಿ ಹಬ್ಬದ ದಿನವೂ ವರ್ಷಧಾರೆ ಆಗುವ ಮುನ್ಸೂಚನೆ ಇದೆ.
ಮಲಗಿದ್ದವರ ಮೇಲೆ ಕಲ್ಲುಚಪ್ಪಡಿ ಬಿದ್ದು ಅಪ್ಪ-ಮಗ ಸಾವು, ತಾಯಿ-ಮಗಳ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − ten =
Remember me
