ಬೆಂಗಳೂರು: ರಾಜ್ಯದ ಬಹುತೇಕ ಭಾಗಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಅಲ್ಲದೇ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಭಾಗಗಳಲ್ಲಿ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಹಾಸನ, ಕೊಡಗು, ಮೈಸೂರಿನಲ್ಲಿ ಕೂಡ ಮಳೆಯಾಗಲಿದೆ.
ಕಳೆದ ಕೆಲ ದಿನಗಳಿಂದ ಭರ್ಜರಿ ಮಳೆಯಾಗುತ್ತಿದ್ದು, ಕರ್ನಾಟಕದ ಬಹುತೇಕ ಜಲಾಶಗಳು ತುಂಬಿ ಹರಿಯುತ್ತಿದೆ. ಉತ್ತರಕನ್ನಡ ಜಿಲ್ಲೆಯ ಹಲವೆಡೆ ಗುಡ್ಡ ಕುಸಿದು ಮನೆಯ ಒಳಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ.
ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗುತ್ತಿದ್ದು, ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಜುಲೈ 12 ರಿಂದ 31 ರವರೆಗೆ ತಮಿಳುನಾಡಿಗೆ ಪ್ರತಿದಿನ ಒಂದು tmc ಅಡಿ ನೀರನ್ನು ಬಿಡುಗಡೆ ಮಾಡುತ್ತಿದೆ.
ಮಳೆಯ ಆರ್ಭಟಕ್ಕೆ ವರದಾ, ಕುಮದ್ವತಿ ಹಾಗೂ ಶರಾವತಿ ನದಿಗಳು ಮೈದುಂಬಿವೆ. ಬದ್ರಾ ಜಲಾಶಯಕ್ಕೆ 16,041 ಕ್ಯುಸೆಕ್​ ಒಳಹರಿವು ಇದೆ. 186 ಅಡಿ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 141.3 ಅಡಿ ನೀರಿದೆ. ಕಳೆದ ವರ್ಕ್ಷವೂ ಇದೇ ಅವಧಿಯಲ್ಲಿ 141.3 ಅಡಿ ನೀರಿತ್ತು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:nine + 10 =
Remember me
