ಬೆಂಗಳೂರು:ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 5 ದಿನಗಳಿಗೆ ಮುಂದುವರಿಯಲಿದೆ. ಸೋಮವಾರ ತುಮಕೂರು 11 ಸೆಂ.ಮೀ., ಭಾಗಮಂಡಲ 9 ಸೆಂ.ಮೀ. ಮಳೆ ಬಿದ್ದಿದೆ.
ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಆ.2ರಿಂದ ಆ.5ರವರೆಗೆ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಹೇಳಿದೆ. ತುಮಕೂರು, ರಾಮನಗರದಲ್ಲಿ ಆ.4ರಂದು ಮತ್ತು ಬೀದರ್‌ನಲ್ಲಿ ಆ. 5ರಂದು ಭಾರಿ ಮಳೆ ಬೀಳುವ ಮೂನ್ಸೂಚನೆ ಇರುವುದರಿಂದ ಇಲಾಖೆ ಆರೆಂಜ್ ಅಲರ್ಟ್ ಕೊಟ್ಟಿದೆ.
ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಚಿತ್ರದುರ್ಗ, ತುಮಕೂರು, ಚಾಮರಾಜನಗರ ಮುಂದಿನ 24 ಗಂಟೆ ಹಾಗೂ ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗದಲ್ಲಿ ಆ.5ರಂದು ಯೆಲ್ಲೋ ಅಲರ್ಟ್ ಇರಲಿದೆ. 10 ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಪ್ರಸ್ತುತ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ಕಬಾಬ್ ರುಚಿಯಾಗಿ ಇರಲಿಲ್ಲ ಅಂತ ಹೆಂಡ್ತಿಗೆ ಇರಿದು ಹಲ್ಲೆ ಮಾಡಿದ; ಮರುದಿನವೇ ಆತ್ಮಹತ್ಯೆ ಮಾಡ್ಕೊಂಡ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 2 =
Remember me
