ಬೆಂಗಳೂರು:ಇಂದು ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಉಡುಪಿ, ಮಂಡ್ಯ, ಹಾವೇರಿ, ಧಾರವಾಡ ದಕ್ಷಿಣಕನ್ನಡ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯ ಕಾರಣ ಕೆಲವೆಡೆ ಅಪಘಾತಗಳೂ ಆಗುತ್ತಿದ್ದು ಜನರು ಮೃತಪಟ್ಟಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಮಳೆ ಅಬ್ಬರ ಹಿನ್ನೆಲೆ ಇಂದು ಜಿಲ್ಲೆಯ ಎಲ್ಲ ಶಾಲಾ-ಕಾಲೇಜ್‌ಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ. ಧಾರವಾಡದಲ್ಲಿ ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ, ಪದವಿ ಕಾಲೇಜ್ ಎಲ್ಲವುಗಳಿಗೂ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಿಗೂ ಈ ರಜೆ ಅನ್ವಯ ಆಗಲಿದೆ.
ಕರಾವಳಿ ಭಾಗವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಸುಳ್ಯ ತಾಲೂಕಿನ ಆಯ್ದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ, ಎಸ್ಎಸ್​ಪಿಯು ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ವಾಲ್ಮೀಕಿ ಆಶ್ರಮ ಶಾಲೆ ಸುಬ್ರಹ್ಮಣ್ಯ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವರಹಳ್ಳಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೇಲ್ಯಡ್ಕ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಲ್ಕುಂದ ಹಾಗೂ ಹರಿಹರ ಕ್ಲಸ್ಟರ್​ನ ಎಲ್ಲಾ ಶಾಲೆಗಳು ಹಾಗೂ ನೆಲ್ಯಾಡಿಯ ಬೆಥನಿ ಜ್ಞಾನೋದಯ ಶಾಲಾ ಆಡಳಿತ ಮಂಡಳಿ ಶಾಲೆಗಳು ಮಳೆಯ ಕಾರಣ ರಜೆ ಘೋಷಿಸಿವೆ.
ಇನ್ನು, ಕಡಬ ತಾಲೂಕು ಆಡಳಿತವೂ ಮಕ್ಕಳ ಪರದಾಟ ನೋಡಲಾರದೆ, ರಜೆ ಘೋಷಿಸಿದೆ. ಈ ಕುರಿತಾಗಿ ಕಡಬ ತಹಶಿಲ್ದಾರ್ ರಮೇಶ್ ಬಾಬು ಆದೇಶ ಮಾಡಿದ್ದು ಇಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು ಉಳಿದಂತೆ ತಾಲೂಕಿನ ಪಿಯು‌ ಮತ್ತು ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ.
ಇದೀಗ ಭಾರಿ ಮಳೆ ಸುರಿಯುತ್ತಿರುವ ಕಾರಣ, ಉತ್ತರಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರಾವಳಿ ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಯಿಂದ ಕಾಲೇಜಿನವರೆಗೆ ರಜೆ ಘೋಷಿಸಲಾಗಿದೆ. ಈ ಕುರಿತಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಘೋಷಣೆ ಮಾಡಿದ್ದಾರೆ.
ಪದವಿ ಹಾಗೂ ಸ್ನಾತಕೋತ್ತರ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಇಲ್ಲವೇ?
ಪ್ರತಿ ಬಾರಿಯೂ ಕಾಲೇಜುಗಳಿಗೆ ರಜೆ ಎಂದಾಗ ಯಾವ ಕಾಲೇಜು ಎನ್ನುವ ಅನುಮಾನ ಅನೇಕ ವಿದ್ಯಾರ್ಥಿಗಳಲ್ಲಿ ಮೂಡುತ್ತದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ಬಾರಿ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಷ್ಟೇ ರಜೆಯನ್ನು ನೀಡಲಾಗಿದ್ದು, ಉಳಿದಂತೆ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಎಂದಿನಂತೆ ತರಗತಿಗೆ ತೆರಳಬೇಕಾಗಿರುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 9 =
Remember me
