ಬೆಂಗಳೂರು:ಕಳೆದ ವಾರದಿಂದ ಎಡಬಿಡದೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರುನಾಡು ತತ್ತರಿಸಿದ್ದು, ಬೆಳೆದಿದ್ದ ಬೆಳೆಗಳು ಹಾನಿಗೀಡಾಗುವ ಮೂಲಕ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಈ ನಡುವೆ ಜನ-ಜೀವನದ ಮೇಲೂ ಭಾರೀ ಪರಿಣಾಮ ಬೀರಿದೆ.
ಮಾನ್ಸೂನ್​ ಮುನ್ನವೇ ಸುರಿದಿರುವ ಮಳೆಯಿಂದಾದ ಆಗು-ಹೋಗುಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಶನಿವಾರ ವಿಡಿಯೋ ಕಾನ್ಪರೆನ್ಸ್​ ಮೂಲಕ ಸಭೆ ನಡೆಸಿದರು.
ಗೃಹ ಕಚೇರಿ ಕೃಷ್ಣಾದಿಂದ ವೀಡಿಯೋ ಕಾನ್ಪೆರೆನ್ಸ್ ಮೂಲಕ ಸಭೆ ನಡೆಸಿದ ಮುಖ್ಯಮಂತ್ರಿಗಳು, ರಾಜ್ಯದ ಮಳೆಯ ಪರಿಸ್ಥಿತಿ ಕುರಿತು ಅವಲೋಕಿಸಲಾಗಿದ್ದು, ಹಾನಿಗೀಡಾದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಹಾರ ನೀಡುವಂತೆ ಸೂಚಿಸಿದರು.
ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ, ಮಳೆಯಿಂದ ಆಗಿರುವ ಹಾನಿ, ಹಾನಿಗೆ ಕೈಗೊಂಡ ಪರಿಹಾರ ಕಾರ್ಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.
ಅಲ್ಲದೇ ಬೇರೆ ರಾಜ್ಯಗಳಲ್ಲಿ ಸುರಿಯುತ್ತಿರುವ ಮಳೆ, ಮುಂದಿನ ಮುಂಗಾರು ಮಳೆಗೆ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಮಾಲೋಚಿಸಿದ ಮುಖ್ಯಮಂತ್ರಿ ಶೀಘ್ರದಲ್ಲೇ ಸಿದ್ಧತೆ ಕೈಗೊಳ್ಳಬೇಕೆಂದು ಸೂಚಿಸಿದರ.
ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ. ಸೋಮಣ್ಣ, ಇಂಧನ ಸಚಿವ ಸುನಿಲ್ ಕುಮಾರ್ ಭಾಗಿಯಾಗಿದ್ದರು.(ದಿಗ್ವಿಜಯ ನ್ಯೂಸ್​)
ಸೋಮಣ್ಣ ಅವರಿಗೆ ನನ್ನ ಆರೋಗ್ಯದ ಬಗ್ಗೆ ಕಾಳಜಿ ಬೇಡ, ಅದಕ್ಕೆಂದೇ ವೈದ್ಯರಿದ್ದಾರೆ: ಎಚ್​​ಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
