ಬೆಂಗಳೂರು:ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್​ 12ರಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರೆಡ್​ ಅಲರ್ಟ್​ ಘೋಷಿಸಲಾಗಿದೆ. ಈ ಅವಧಿಯಲ್ಲಿ 205 ಮಿಮೀಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಹಾಗೇ ಈ ಭಾಗದಲ್ಲಿ ಸೆ.10ರಂದು ಯೆಲ್ಲೋ ಮತ್ತು ಸೆ.11, 13 ರಂದು ಆರೆಂಜ್​ ಅಲರ್ಟ್​ ಇರಲಿದೆ. ಕರಾವಳಿಯಲ್ಲಿ ಗಾಳಿಯ ವೇಗವೂ ಹೆಚ್ಚಾಗಿ ಇರುವುದರಿಂದ ಸಮುದ್ರಕ್ಕೆ ಮೀನುಗಾರರು ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಇದನ್ನೂ ಓದಿ:ನಾಳೆ ನಿನ್ನ ಅಹಂಕಾರ ಮುರೀತೀನಿ … ಉದ್ಧವ್​ಗೆ ಕಂಗನಾ ಚಾಲೆಂಜ್​
ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮುಂದಿನ 4 ಆರೆಂಜ್ ಅಲರ್ಟ್ ಇರಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ಮುಂದಿನ 4 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿ ಯಲ್ಲಿ ಸೆ.11ರಿಂದ ಸೆ.14ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ವಿವರಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರಕ್ಕೆ ತೀವ್ರ ಮುಖಭಂಗ: ಕಂಗನಾ ಕಚೇರಿ ತೆರವಿಗೆ ಬಾಂಬೈ ಹೈಕೋರ್ಟ್​ ತಡೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + twenty =
Remember me
