ಬೆಂಗಳೂರು:ರಾಜ್ಯದಲ್ಲೆಡೆ ಕ್ಷೀಣವಾಗಿದ್ದ ಮಳೆ,ದಕ್ಷಿಣ ಕರ್ನಾಟಕದ ಹಲವೆಡೆ ಸೋಮವಾರದಿಂದ ಬಿರುಸುಗೊಳ್ಳಲಿದೆ. ಚಾಮರಾಜನಗರ, ರಾಮನಗರದಲ್ಲಿ ಮುಂದಿನ 5 ದಿನ, ಬೆಂಗಳೂರು. ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಆ.14ರಿಂದ ಮುಂದಿನ ಮೂರು ದಿನ ಭಾರಿ ಮಳೆ ಬೀಳುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಕೊಟ್ಟಿದೆ.
ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಆ.12ರಿಂದ ಮುಂದಿನ ಐದು ದಿನ, ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಬೀದರ್​, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಆ.15ರಿಂದ ಆ.18ರವರೆಗೆ ಗುಡುಗು ಮಿಂಚು ಸಹಿತ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಹಿಂದುಗಳ ಮೇಲೆ ನಡೆಯುತ್ತಿರುವ ಕ್ರೌರ್ಯ ತಡೆಯಿರಿ : ರವಿಶಂಕರ ಗುರೂಜಿ ಒತ್ತಾಯಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್​.ಪಾಟೀಲ್​ ಮಾತನಾಡಿ, ಸದ್ಯದ ಹವಾಮಾನ ಸ್ಥಿತಿ ಗಮನಿಸಿದರೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಇಳಿಮುಖವಾಗಿದೆ. ಮುಂದಿನ ಮೂರು ದಿನ ಕಡಿಮೆಯಾಗಿರುವ ಮಳೆ, ಆ.15ರಿಂದ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಸುರಿಯುವ ಸಾಧ್ಯತೆ ಇದೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − one =
Remember me
