ಬೆಂಗಳೂರು:ಪ್ರಸಕ್ತ ತಿಂಗಳಲ್ಲಿ ರಾಜ್ಯದ ಹಲವೆಡೆ ವಾಡಿಕೆ ಅಥವಾ ವಾಡಿಕೆಗಿಂತ ಅಧಿಕ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮೂನ್ಸೂಚನೆ ಕೊಟ್ಟಿದೆ. ಆದರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮಾತ್ರ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿಯಲಿದ್ದು, ಸ್ವಲ್ಪ ಕೊರತೆ ಕಾಡಲಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಈ ತಿಂಗಳಲ್ಲಿ ವಾಡಿಕೆಯಷ್ಟೇ ಅಥವಾ ವಾಡಿಕೆಗಿಂತ ಹೆಚ್ಚಾಗಿ ಮಳೆ ಸುರಿಯಬಹುದು.
4ರಿಂದ ಮಳೆ ಚುರುಕು:ಜು 4ರಿಂದ ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜು.4ರಿಂದ ಜು.6ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಜು.6ರಂದು ಅತಿ ಹೆಚ್ಚು ಮಳೆಯಾಗಲಿದ್ದು, ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದೆ. ಅದಕ್ಕಿಂತ ಮುನ್ನ ಜು.4 ಮತ್ತು ಜು.5ರಂದು ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಕೊಡಲಾಗಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ಜೂನ್‌ನಲ್ಲಿ ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿತ್ತು. 100 ತಾಲೂಕುಗಳಲ್ಲಿ ಮಳೆ ಕುಂಠಿತವಾದರೆ, 87 ತಾಲೂಕುಗಳಲ್ಲಿ ತೀವ್ರವಾಗಿ ಮಳೆ ಅಭಾವ ಉಂಟಾಗಿದೆ. ಜೂ 1ರಿಂದ ಜೂ.30ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 199 ಮಿಮೀ ಮಳೆಯಾಗಬೇಕಿತ್ತು. 87 ಮಿಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.56ರಷ್ಟು ಕಡಿಮೆ ಪ್ರಮಾಣದಲ್ಲಿ ಸುರಿದಿದೆ. ದಕ್ಷಿಣ ಕರ್ನಾಟಕದಲ್ಲಿ ಶೇ.18, ಉತ್ತರ ಕರ್ನಾಟಕದಲ್ಲಿ ಶೇ. 55, ಮಲೆನಾಡಲ್ಲಿ ಶೇ. 74, ಕರಾವಳಿಯಲ್ಲಿ ಶೇ. 57 ಮಳೆ ಕುಂಠಿತವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.
ರಾಜ್ಯದ ಬಹುತೇಕ ಜಿಲ್ಲೆಗಳು ಮಳೆಯಾಶ್ರಿತ ಕೃಷಿಯನ್ನೇ ಅವಲಂಬಿಸಿವೆ. ಆದರೆ, ವಾಡಿಕೆಗಿಂತ ತಡವಾಗಿ ಆಗಮಿಸಿದ್ದ ಮುಂಗಾರು ಆರಂಭದಲ್ಲಿ ದುರ್ಬಲಗೊಂಡಿತ್ತು. ಹೀಗಾಗಿ, ಬಿತ್ತನೆ ಚಟುವಟಿಕೆಗೆ ಕುಂಠಿತವಾಗಿತ್ತು. ಮೇನಲ್ಲಿ ಅಲ್ಪಸ್ವಲ್ಪ ಬಿದ್ದ ಮುಂಗಾರುಪೂರ್ವ ಮಳೆಯಿಂದಾಗಿ ಜಮೀನು ಹದಗೊಳಿಸಿದ್ದ ರೈತರು, ಜೂನ್ ಮೊದಲ ವಾರದಲ್ಲಿ ಬಿತ್ತನೆ ಕಾರ್ಯ ಮಾಡಿದ್ದರು. ಆದರೆ, ಇಡೀ ತಿಂಗಳು ಮುಂಗಾರು ಕೈಕೊಟ್ಟ ಪರಿಣಾಮದಿಂದಾಗಿ ಬಿತ್ತನೆ ಮಾಡಿದ್ದ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ.
ಇದನ್ನೂ ಓದಿ:ಸಿಎಂ-ಡಿಸಿಎಂಗೆ ಕಾದು ಕಾದು ಸುಸ್ತಾದ ವೈದ್ಯರು; 2 ಗಂಟೆ ತಡವಾಗಿ ಆರಂಭವಾದ ವೈದ್ಯರ ದಿನಾಚರಣೆ
ಈ ವರ್ಷವೂ ಕುಂಠಿತ:ರಾಜ್ಯಕ್ಕೆ ತಡವಾಗಿ ಆಗಮಿಸಿದ್ದ ಮುಂಗಾರು ದುರ್ಬಲಗೊಂಡ ಪರಿಣಾಮ ಜೂನ್‌ನಲ್ಲಿ ತೀವ್ರ ಮಳೆ ಕೊರತೆಯಾಯಿತು. ಮೂರ್ನಾಲ್ಕು ವರ್ಷಗಳಿಂದ ಮಳೆ ದಿನ ಬದಲಾಗುತ್ತಿದೆ. ಈ ಕಾರಣದಿಂದಾಗಿ 2020 ಮತ್ತು 2022ರ ಜೂನ್‌ನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಬಿದ್ದರೆ, 2021ರ ಜೂನ್‌ನಲ್ಲಿ ಮಾತ್ರ ವಾಡಿಕೆಯಷ್ಟೇ ಮಳೆ ಸುರಿದಿತ್ತು. ಆದರೆ, ಮೂರು ವರ್ಷಗಳಿಂದಲೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಕುಂಠಿತವಾಗಿತ್ತು. ಈ ಬಾರಿಯೂ ಆ ಭಾಗಗಳಲ್ಲಿ ಮಳೆ ಅಭಾವ ಉಂಟಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನಲಲ್ಲಿಯೂ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಬಿದ್ದಿದೆ.
ಪಿಕ್​ನಿಕ್​ಗೆ ತೆರಳಿದ್ದ 27 ವರ್ಷದ ಯುವಕ ಹೃದಯಾಘಾತದಿಂದ ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
