ಬೆಂಗಳೂರು:ರಾಜ್ಯದ ಹಲವೆಡೆ ಬಿರುಸಾಗಿ ಮಳೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾವೇರಿ, ಕೊಡಗು, ಯಾದಗಿರಿ, ಉಡುಪಿ ಹಾಗೂದಕ್ಷಿಣ ಕನ್ನಡ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಬುಧವಾರವೂ ವರುಣಾರ್ಭಟದಿಂದ ಜನಜೀವನ ಅಸ್ತವ್ಯಸ್ತವಾಗಿದೆ.ಕೆಲವೆಡೆ ಶೀತಗಾಳಿ ಬೀಸುತ್ತಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ೋಷಿಸಿದೆ. ಅಲ್ಲದೆ, ಜು.21ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಇರಲಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಜು.20ರಿಂದ ಜು.23ರವರೆಗೆ, ಬೆಳಗಾವಿ, ಕಲಬುರಗಿ, ಬೀದರ್‌ನಲ್ಲಿ ಜು.23ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇದನ್ನೂ ಓದಿ:ಮದುವೆ ಮನೆಗೆ ಏಕಾಏಕಿ ನುಗ್ಗಿದ ಆನೆಗಳು; ವಧುವಿನೊಂದಿಗೆ ಎಸ್ಕೇಪ್​ ಆದ ವರ
ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ. ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ, ಬಾಗಲಕೋಟೆ, ಹಾವೇರಿಯಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
