ಬೆಂಗಳೂರು:ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಅಬ್ಬರಿಸುತ್ತಿರುವ ಮಳೆಯು ಮುಂದಿನ 24 ಗಂಟೆ ಮತ್ತಷ್ಟು ಹೆಚ್ಚಾಗಲಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಅ.25ರಂದು ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.48 ಗಂಟೆ ಭಾರಿ ಮಳೆಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಬೆಚ್ಚಿ ಬಿದ್ದಿರುವ ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ೋಷಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.ಬೆಂಗಳೂರಲ್ಲೇ ಅಧಿಕ ಮಳೆಒಂದು ವಾರದಲ್ಲಿ ಬೆಂಗಳೂರು ನಗರದಲ್ಲಿ ಅಧಿಕ ಮಳೆಯಾಗಿದೆ. ವಾಡಿಕೆಯಂತೆ 32 ಮಿಮೀ ಮಳೆಯಾಗಬೇಕಿತ್ತು. 102 ಮಿಮೀ ಮಳೆಯಾಗಿದ್ದು, ಶೇ.223 ಹೆಚ್ಚು ಮಳೆ ಸುರಿದಿದೆ. ಜೂ.1ರಿಂದ ಸೆ.30ರವರೆಗೆ ಬೆಂಗಳೂರಿನಲ್ಲಿ 369 ಮಿಮೀ ಮಳೆಯಾಗಬೇಕಿತ್ತು. ಆದರೆ, 514 ಮಿಮೀ ಮಳೆ ಸುರಿದಿದ್ದು, ಶೇ.23 ಹೆಚ್ಚು ಮಳೆಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − six =
Remember me
