ಬೆಂಗಳೂರು:ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗ ಸೇರಿ ರಾಜ್ಯದ ನಾನಾ ಭಾಗದಲ್ಲಿ ವರುಣಾರ್ಭಟ ಇರಲಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮೂರು ದಿನ ಮಳೆರಾಯನ ಅಬ್ಬರ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಭಾರೀ ಮಳೆಯಾಗಲಿದೆ.
ಇದನ್ನೂ ಓದಿ:ಇನ್ಮುಂದೆ ನಿಂತ್ಕಂಡೇ ಹೋಗ್ಬೇಕು ಕಣಮ್ಮಾ.. – ಕೆಎಸ್ಸಾರ್ಟಿಸಿ ಬಸ್‌ಗಳು ಓವರ್‌ಲೋಡ್!
ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಎಚ್ಚರಿಕೆಯನ್ನು ನೀಡಿದೆ. ರಾಜ್ಯದ ಕೆಲವೆಡೆ ಬಿರುಗಾಳಿ, ಗುಡುಗು ಮಿಂಚಿನ ಸಾಧ್ಯತೆ ಇರಲಿದೆ. ಗಾಳಿಯು ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.
ಇಂದು ಕೂಡ ಗಾಳಿ ಇದೇ ವೇಗದಲ್ಲಿ ಇರಲಿದೆ. ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40 ರಿಂದ 45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.(ದಿಗ್ವಿಜಯ ನ್ಯೂಸ್​)
ಮನೇಲಿದ್ದ ದುಡ್ಡು-ವಸ್ತು ಹೆಂಡತಿ ತೆಗೆದುಕೊಂಡು ಹೋಗಿದ್ದಾಳೆ, ಏನು ಮಾಡಲಿ?

ಸ್ನಾನ-ಸಾಬೂನಿನ ಗುಟ್ಟು: ದಿನಕ್ಕೆರಡು ಬಾರಿ ಜಳಕ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eighteen =
Remember me
