ಬೆಂಗಳೂರು:ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಚಂಡಮಾರುತ ಪರಿಣಾಮದಿಂದ ರಾಜ್ಯದಲ್ಲಿ ನ.26ರಿಂದ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ಬಳ್ಳಾರಿಯಲ್ಲಿ ನ.26ರಿಂದ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬಹತೇಕ ಜಿಲ್ಲೆಗಳಲ್ಲಿ ನ.28ರಂದು ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ.
ಥಂಡಿ ವಾತಾವರಣ:ನಿವಾರ ಚಂಡಮಾರುತ ಪರಿಣಾಮದಿಂದ ತಮಿಳುನಾಡಿನಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬುಧವಾರ ಬೆಳಗ್ಗೆಯಿಂದಲೇ ಥಂಡಿ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೆ, ಮೋಡ ಕವಿದ ವಾತಾವರಣ ಉಂಟಾಗಿದೆ. ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಏರಳಿತವಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 1 =
Remember me
