ಬೆಂಗಳೂರು:ರಾಜ್ಯದ ಕೆಲವೆಡೆ ಮಾತ್ರ ಸುರಿಯುತ್ತಿರುವ ಮಳೆ ಮುಂದಿನ ಐದು ದಿನ ಬಿರುಸುಗೊಳ್ಳಲಿದೆ. ಶುಕ್ರವಾರ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬಾಳೂರು, ಕಮಠಾಣಾ ಹಾಗೂ ಬೀದರ್ ಉತ್ತರ ಭಾಗಗಳಲ್ಲಿದಲ್ಲಿ ಭರ್ಜರಿ ವರ್ಷಧಾರೆಯಾಗಲಿದೆ.
ಬೀದರ್ ಮತ್ತು ಕಲಬುರಗಿಯಲ್ಲಿ ಏ.29ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಏ.30ರಂದು ಹಾಗೂ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮೈಸೂರಿನಲ್ಲಿ ಏ.30ರಿಂದ ಮುಂದಿನ ಮೂರು ದಿನ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಲಾಖೆಯಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇದನ್ನೂ ಓದಿ:ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ಬೆಂಗಳೂರು ಮತ್ತು ಬೆಂ.ಗ್ರಾಮಾಂತರದಲ್ಲಿ ಮೇ.2ರಂದು ಯೆಲ್ಲೋ ಅಲರ್ಟ್ ಇರಲಿದೆ. ಉಳಿದ ಜಿಲ್ಲೆಗಳ ಕೆಲವಡೆ ಗುಡುಗು ಮಿಂಚು ಸಹಿತ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯಲಿದೆ.
ಇದನ್ನೂ ಓದಿ:ಪ್ಲಾಸ್ಟಿಕ್​​ ಸರ್ಜರಿ ಬಳಿಕ ಹೃದಯಾಘಾತದಿಂದ ಪ್ರಾಣ ಬಿಟ್ಟ ನಟಿ!ಉಡುಪಿ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 24 ಗಂಟೆ ಸಾಧಾರಣ ಮಳೆ ಸುರಿದರೆ, ನಂತರ, ಒಣಹವೆ ಮುಂದುವರಿಯಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ತುಸು ಇಳಿಕೆಯಾಗಿದೆ. ಬಳ್ಳಾರಿಯಲ್ಲಿ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ರಸ್ತೆಯಲ್ಲಿ ನಮಾಜ್ ಮಾಡಿದ 2,000 ಜನರ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + five =
Remember me
