ಬೆಂಗಳೂರು:ರಾಜ್ಯದಲ್ಲಿ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಶುರುವಾಗಲಿದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ, ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಕೂಡ ಘೋಷಿಸಿದೆ.
ನಾಡಿದ್ದೇ ಅಂದರೆ ಆ.22ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ, ಉಡುಪಿ, ದಕ್ಷಿಣಕನ್ನಡ, ಉತ್ತರ ಕನ್ನಡದಲ್ಲಿ ಆ.22ರಿಂದ ಆ.24ರವರೆಗೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಕೋಲಾರದಲ್ಲಿ ಆ.23ರಿಂದ ಮುಂದಿನ ಎರಡು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಮತ್ತು ಚಾಮರಾಜನಗರದಲ್ಲಿ ಆ.24ರಂದು ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಈ ತಿಂಗಳ ಮೊದಲ 10 ದಿನವರೆಗೆ ಸುರಿದಿದ್ದ ಭಾರಿ ಮಳೆ ನಂತರ ಕುಂಠಿತವಾಯಿತು. ಆ.14ರಿಂದ ಆ.20ರವರೆಗೆ 50 ಮಿಮೀ ಮಳೆ ಬದಲಾಗಿ 13 ಮಿಮೀ ಮಳೆಯಾಗಿದ್ದು, ಶೇ.74 ವಾಡಿಕೆಗಿಂತ ಕಡಿಮೆ ಸುರಿದಿದೆ.
ಮದ್ಯಪಾನ-ಧೂಮಪಾನ ಪ್ರಿಯರಿಗಿದು ಆಘಾತಕಾರಿ ಸುದ್ದಿ; ಸಮೀಕ್ಷೆಯೊಂದು ಹೊರಗೆಡಹಿದೆ ಭೀಕರ ಸಂಗತಿ..
ಫುಲ್​ ಟೈಟ್ ಆಗಿ ಹೈ-ವೋಲ್ಟೇಜ್​ ವಿದ್ಯುತ್ ಕಂಬಕ್ಕೇರಿದ ಯುವಕ; ಕೆಳಗಿಳಿಯದೆ ಗಂಟೆಗಟ್ಟಲೆ ತಲೆನೋವಾಗಿದ್ದ..
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:ten − 6 =
Remember me
