ಕಲಬುರಗಿ:ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಬಹಿರ್ದೆಸೆಗೆ ಹೋಗಿದ್ದ ಯುವಕರಿಬ್ಬರ ಪೈಕಿ ಒಬ್ಬ ಜನರ ಕಣ್ಣೆದುರೇ ಭಾನುವಾರ ಬೆಳಗ್ಗೆ ಜಲಸಮಾಧಿಯಾದ ಬೆನ್ನಲ್ಲೇ ಮತ್ತೊಂದು ದುರಂತ ಕಲಬುರಗಿಯಲ್ಲಿ ಸಂಭವಿಸಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶಹಬಾದ್ ಪಟ್ಟಣದಲ್ಲಿ ಬಾಲಕರಿಬ್ಬರು ನೀರುಪಾಲಾಗಿದ್ದಾರೆ.
ಧಾರಾಕಾರ ಮಳೆಯಿಂದಾಗಿ ಹಳೇ ಶಹಾಬಾದ್ ಬಡಾವಣೆ ಹತ್ತಿರದ ಅಜನಿ ಹಳ್ಳದಲ್ಲಿ ಪ್ರವಾಹ ಉಂಟಾಗಿದೆ. ಹಳ್ಳಕ್ಕೆ ಅಡ್ಡಲಾಗಿ ಕಟ್ಟಿದ ಚೆಕ್ ಡ್ಯಾಂ ಮೇಲೂ ನೀರು ಹರಿಯುತ್ತಿತ್ತು. ಆದರೂ ಹಳೇ ಶಹಾಬಾದ್ ನಿವಾಸಿ ವಿಶ್ವನಾಥ ರಾಜು ರಾಜನ್ (14) ಮತ್ತು ಪೂರ್ಣಚಂದ್ರ ಆನಂದ ಜಾಯಿ (15) ಹಳ್ಳ ದಾಟಲು ಕಾಲಿಡುತ್ತಿದ್ದಂತೆಯೇ ಕಾಲು ಜಾರಿ ಕೆಳೆಗೆ ಬಿದ್ದು ನೀರಿನ ರಭಸಕ್ಕೆ ಕೊಚ್ಚಿ ಹೋದರು. ನೋಡನೋಡುತ್ತಿದ್ದಂತೆಯೇ ಪ್ರಾಣಬಿಟ್ಟರು.
ಸ್ಥಳಕ್ಕೆ ದೌಡಾಯಿಸಿದ ಪೊಲೀಸರಿಗೆ ಅನತಿ ದೂರದಲ್ಲಿ ಶವಗಳು ಪತ್ತೆಯಾಗಿವೆ. ಶಹಾಬಾದ್ ಠಾಣೆಯಲ್ಲಿ ದಾಖಲಾಗಿದೆ. ಮಕ್ಕಳ ಶವವನ್ನು ಹೊರ ತೆಗೆಯುತ್ತಿದ್ದಂತೆ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು.
ನಿವೇಶನದ ಸುತ್ತಲೂ 8 ಅಡಿ ಎತ್ತರದ ಕಾಂಪೌಂಡ್​ ನಿರ್ಮಿಸಿ ಗಾಂಜಾ ಬೆಳೆದರು!

ಹಿಂದು ಎಂಬುದು ಧರ್ಮವೇ ಅಲ್ಲ; ಮತ್ತೊಂದು ವಿವಾದದ ಕಿಡಿ ಹಚ್ಚಿದ ಪ್ರೊ.ಭಗವಾನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 3 =
Remember me
