ವಿಟ್ಲ:ಮನೆ ಮೇಲೆ ಗುಡ್ಡ ಕುಸಿದು ಮನೆ ಸಂಪೂರ್ಣವಾಗಿ ನೆಲಸಮಗೊಂಡ ಪರಿಣಾಮ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಮಂಗಳಪದವು ಸಮೀಪದ ಬನಾರಿ ಬಾಬುಕಟ್ಟೆ ಎಂಬಲ್ಲಿ ಸಂಭವಿಸಿದೆ‌.
ತರಕಾರಿ ವ್ಯಾಪಾರ ನಡೆಸುತ್ತಿರುವ ಅಬ್ದುಲ್ಲ ಎಂಬವರ ಮನೆಯ ಪಕ್ಕದ ಧರೆ ಜೋರಾದ ಮಳೆಗೆ ಕುಸಿದು ಮನೆ ಮೇಲೆ ಉರುಳಿ ಬಿದ್ದಿದೆ. ಇದರಿಂದ ಮನೆಯ ಸಂಪೂರ್ಣವಾಗಿ ನೆಲಸಮವಾಗಿದೆ. ಘಟನೆಯಲ್ಲಿ ಕುಟುಂಬದ ಆರು ಮಂದಿ ಮನೆಯ ಅವಷೇದದಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದರು. ತಕ್ಷಣವೇ ಕಾರ್ಯ ಪ್ರವೃತ್ತರಾದ ಸ್ಥಳೀಯರು ಆರು ಮಂದಿಯನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಇದನ್ನೂ ಓದಿ:ಟ್ರಂಪ್​ ಹೆಸರಲ್ಲಿ ಬಂದ ಪತ್ರದಲ್ಲಿ ಪ್ರಾಣಘಾತಕ ವಿಷ: ಕಳಿಸಿದ್ಯಾರು? ಆತಂಕದಲ್ಲಿ ಶ್ವೇತಭವನ!
ಮನೆ ಯಜಮಾನ ಅಬ್ದುಲ್ಲ, ಪತ್ನಿ ಜೋಹಾರ, ಮಕ್ಕಳಾದ ಅರಫಾಝ್, ಇರ್ಪಾನ್, ತಸ್ಲೀಮಾ, ಮಿಶ್ರಿಯಾ ಗಾಯಗೊಂಡಿದ್ದು, ವಿಟ್ಲ ಹಾಗೂ ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ.
ನೋಟ್​ ಬ್ಯಾನ್​ ಅರಿವಿಲ್ಲದೆ ಹಣ ಸಂಗ್ರಹ: ಅಜ್ಜಿಯ ಜೀವನ ಬದಲಿಸಿತು ಗಾಳಿಯಲ್ಲಿ ಹಾರಿದ ನೋಟು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − seven =
Remember me
