ಬೆಂಗಳೂರು:ರಾಜ್ಯದಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಬುಧವಾರದಿಂದ ಇನ್ನೂ ಎರಡು ದಿನ ವರ್ಷಧಾರೆ ಮುಂದುವರಿಯಲಿದೆ. ಜತೆಗೆ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ, ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಗಾಳಿಯ ವೇಗವು 40-50 ಕಿ.ಮೀ. ವೇಗದಲ್ಲಿ ಬೀಸಲಿದ್ದು, ಕೆಲವೆಡೆ ಸಾಧಾರಣ ಪ್ರಮಾಣದ ವರ್ಷಧಾರೆಯಾಗಬಹುದು. ದಕ್ಷಿಣ ಒಳನಾಡಿನ ಇನ್ನುಳಿದ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಬಹುದು. ಆದರೆ, ಗುರುವಾರ ಈ ಪ್ರದೇಶಗಳಲ್ಲಿ ಭಾರೀ ವರ್ಷಧಾರೆಯಾಗುವ ನಿರೀಕ್ಷೆ ಇದೆ. ಆ ಬಳಿಕ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಕಡಿಮಯಾಗಲಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮೀನುಗಾರರಿಗೆ ಎಚ್ಚರಿಕೆ:
ರಾಜ್ಯದ ಕರಾವಳಿ ತೀರದುದ್ದಕ್ಕೂ ಪ್ರತೀ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿರುವ ಕಾರಣ ಮೀನುಗಾರರು ಸಮದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಪೂರ್ವ ಮುಂಗಾರು ಆರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಮೀನುಗಾರರನ್ನು ಎಚ್ಚರಿಸಲಾಗಿದೆ.
ವಾರಾಂತ್ಯಕ್ಕೆ ಮಳೆ ಕ್ಷೀಣ?:
ಪ್ರಸ್ತುತ ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗುತ್ತಿದೆ. ಆದರೆ, ವಾರಾಂತ್ಯದ ವೇಳೆಗೆ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ. ಶುಕ್ರವಾರ ಅಥವಾ ಶನಿವಾರದಿಂದ ವರ್ಷಧಾರೆ ಕಡಿಮೆಯಾಗಲಿದ್ದು, ಒಳನಾಡು ಜಿಲ್ಲೆಗಳಲ್ಲಿ ಹಗುರ ಮಳೆ ಮಾತ್ರ ನಿರೀಕ್ಷಿಸಬಹುದು ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 10 =
Remember me
