ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದೆ, ಜೂನ್ 6 ರಿಂದ ಜೂನ್​ 10ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಟೌನ್ ಹಾಲ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ಬಸವೇಶ್ವರ ನಗರ, ಗೋವಿಂದರಾಜ ನಗರ, ಗಿರಿನಗರ, ವಿಜಯನಗರ, ಚಾಮರಾಜಪೇಟೆ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಮಳೆಯಿಂದ ರಸ್ತೆಗಳೆಲ್ಲ ತುಂಬಿದ್ದು, ಸವಾರರು ಹೈರಾಣಾಗಿದ್ದಾರೆ.
ಇನ್ನುಳಿದಂತೆ ವಿಜಯನಗರ, ತುಮಕೂರು,ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಯಾದಗಿರಿ, ಹಾವೇರಿ, ಧಾರವಾಡ, ಬೀದರ್​ನಲ್ಲಿ ಕೂಡ ಮಳೆಯಾಗಲಿದೆ.
ತುಮಕೂರು ಜಿಲ್ಲೆಯಾದ್ಯಂತ ಬುಧವಾರವೂ ಎರಡು ಗಂಟೆಗಳ ಕಾಲ ಮಳೆಯಾಗಿದೆ. ಮಳೆಯಿಂದ ನಗರದ ಅಂತರಸನಹಳ್ಳಿ ಅಂಡರ್ ಪಾಸ್ ಜಲಾವೃತ್ತವಾಗಿತ್ತು. ಚಿತ್ರದುರ್ಗದ ಹಲವೆಡೆ ಮಳೆ ಸುರಿದಿದ್ದು, ಹಿರಿಯೂರು ತಾಲೂಕಿನ ಟಿಬಿ ವೃತ್ತದ ರಸ್ತೆ ಮಳೆ ನೀರಿನಿಂದ ಮುಚ್ಚಿ ಹೋಗಿತ್ತು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುರಿದ ಮಳೆ ಅವಾಂತರ ಸೃಷ್ಟಿಸಿದೆ. ಚಿಂತಾಮಣಿಯ ಈಶ್ವರ ದೇವಸ್ಥಾನ ಹಿಂಭಾಗದ ಮನೆಗೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
ಅದರಲ್ಲೂ ಸಿಲಿಕಾನ್​ ಸಿಟಿಯಲ್ಲಿ ಜೋರಾಗಿ ಸುರಿದ ಮಳೆಗೆ ರಸ್ತೆಗಳು ಕಿತ್ತು ಬಂದು ದೊಡ್ಡ ದೊಡ್ಡ ಹೊಂಡಗಳೇ ಆಗಿವೆ. ಅಲ್ಲದೇ ರಸ್ತೆಯ ಮೇಲೆ ಬಿದ್ದ ಗಿಡ ಮರಗಳಿಂದಾಗಿ ಓಡಾಡೋಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + sixteen =
Remember me
