ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ.
ಚಿಕ್ಕಮಗಳೂರಿನ ಮೂಡುಗೆರೆ, ಚಾಮರಾಜನಗರದ ಹರದನಹಳ್ಳಿ, ಮಂಡ್ಯ, ಮೈಸೂರಿನ ಹುಣಸೂರು ಹಾಗೂ ತುಮಕೂರಿನ ಕೋನಹಳ್ಳಿ ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಮಳೆ ಬಿದ್ದಿದೆ. ಉಡುಪಿ. ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ ಎರಡು ದಿನ ಹಾಗೂ ಚಿಕ್ಕಮಗಳೂರು, ಕೊಡಗಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಮೂನ್ಸೂಚನೆ ಕೊಟ್ಟಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಹಾಗೂ ರಾಮನಗರದಲ್ಲಿ ನ.7ರಂದು ಯೆಲ್ಲೋ ಅಲರ್ಟ್ ಇರಲಿದೆ.
ಇದನ್ನೂ ಓದಿ:ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಆತಂಕ; ವಾಯುಮಾಲಿನ್ಯ ಸಂಕಷ್ಟದ ನಡುವೆಯೇ ಮತ್ತೊಂದು ಭೀತಿ!
ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರಿನಲ್ಲಿ ನ.8ರಿಂದ ನ.10ರವರೆಗೆ ಗುಡುಗು ಸಹಿತ ಸಾಧಾರಣ ವರ್ಷಧಾರೆಯಾಗಲಿದೆ.ನೆರೆಯ ತಮಿಳುನಾಡು, ಕೇರಳದಲ್ಲಿ ಹೆಚ್ಚು ಮಳೆ ಸುರಿಯುತ್ತಿರುವುದರಿಂದ ದಕ್ಷಿಣ ಕರ್ನಾಟಕದ ಕೆಲ ಜಿಲ್ಲೆಗಳ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಆ ಜಿಲ್ಲೆಗಳಲ್ಲಿ ಬಿರುಸಾಗಿ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × 5 =
Remember me
