ಬೆಂಗಳೂರು :ರಾಜ್ಯದ ವಿವಿಧೆಡೆ ಅಬ್ಬರಿಸುತ್ತಿರುವ ಮಳೆ, ಮುಂದಿನ 48 ಗಂಟೆಗಳು ಮತ್ತಷ್ಟು ಬಿರುಸುಗೊಳ್ಳಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಜುಲೈ 19, 20 ರಂದು ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಈ ವೇಳೆ 204 ಮಿಮೀ. ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಈ ಭಾಗಗಳಲ್ಲಿ ಈಗಾಗಲೇ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಎಚ್ಚರಿಕೆಯಿಂದಿರುವಂತೆ ಇಲಾಖೆ ತಿಳಿಸಿದೆ.
ಇದನ್ನೂ ಓದಿ:ಧಾರಾಕಾರ ಮಳೆಗೆ ವಿಟ್ಲ ಹೋಬಳಿಯ ಹಲವು ಕಡೆ ಹಾನಿ
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆಯಲ್ಲಿ ಮುಂದಿನ 48 ಗಂಟೆ ಆರೆಂಜ್ ಅಲರ್ಟ್ ಇರಲಿದೆ. ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಇರಲಿದೆ. ಮೂರು ದಿನಗಳಿಂದ ಬೆಂಗಳೂರಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಕಾರಿನಲ್ಲಿ ಹಣವಿಟ್ಟು ಚಾಲಕನಿಗೆ ಹೇಳಿ ಹೋದರು… ವಾಪಸ್​ ಬಂದಾಗ ಕಾದಿತ್ತು ಶಾಕ್!
ರಾಜ್ಯದಲ್ಲಿ ಸಿನಿಮಾ ಮಂದಿರಗಳಿಗೆ, ಉನ್ನತ ಶಿಕ್ಷಣಕ್ಕೆ ಅವಕಾಶ; ಷರತ್ತುಗಳು ಅನ್ವಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 18 =
Remember me
