ಬೆಂಗಳೂರು:ವಾರದಿಂದ ಅಬ್ಬರಿಸಿ ಇಳಿಮುಖವಾಗಿದ್ದ ಮಳೆ, ಜು.13ರಿಂದ ಚುರುಕುಗೊಳ್ಳುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ,ಶಿವಮೊಗ್ಗ, ಕೊಡಗು,ಚಿಕ್ಕಮಗಳೂರಿನಲ್ಲಿ ಜು.14ರಿಂದ ಜು.16ರವರೆಗೆ ಭಾರಿ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್​ ಅರ್ಲಟ್​ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಯೆಲ್ಲೋ ಅರ್ಲಟ್​ ಇರಲಿದೆ.
ಬೆಳಗಾವಿಯಲ್ಲಿ ಜು.13ರಿಂದ ಮುಂದಿನ 4 ದಿನ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಜು.15ರಂದು ಹೆಚ್ಚಾಗಿ ಮಳೆ ಸುರಿಯುವ ಹಿನ್ನೆಲೆಯಲ್ಲಿ ಯೆಲ್ಲೋ ಅರ್ಲಟ್​ ನೀಡಲಾಗಿದೆ. ಬೆಂಗಳೂರು, ಬೆಂ .ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೋಲಾರ, ತುಮಕೂರು, ವಿಜಯನಗರ, ಬಳ್ಳಾರಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮುಂದಿನ ಎರಡು ದಿನ ಸಾಧಾರಣ ವರ್ಷಧಾರೆಯಾಗಲಿದೆ.
ಡೆಂಘೆ ರೋಗಿಗಳಿಗೆ ಉಚಿತ ರಕ್ತ ನೀಡಲು 500 ಮಂದಿಯಿಂದ ರಕ್ತದಾನಹವಾಮಾನ ಇಲಾಖೆ ಹಿರಿಯ ಅಧಿಕಾರಿ ಸಿ.ಎಸ್​.ಪಾಟೀಲ್​ ಮಾತನಾಡಿ, ಕಳೆದ ವಾರ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿತ್ತು. ಆದರೆ,2-3 ದಿನಗಳಿಂದ ಕರಾವಳಿ, ಉತ್ತರ ಮತ್ತು ದಣ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿದೆ. ಜು.13ರಿಂದ ಕರಾವಳಿ, ಮಲೆನಾಡು ಭಾಗಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − five =
Remember me
