ಬೆಂಗಳೂರು:ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ವರುಣ ದೇವ ಸ್ವಲ್ಪ ಮಟ್ಟಿಗೆ ಕೃಪೆ ತೋರಿದ್ದಾನೆ. ಸಾಮಾನ್ಯವಾಗಿ ತಾಪಮಾನ ಹೆಚ್ಚಳವಾದಾಗ ಮಳೆ ಬರುವುದು ವಾಡಿಕೆ. ಅದರಂತೆ ರಾಜ್ಯದ್ಯಂತ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಉಳಿದಂತೆ ಹೊಸಕೋಟೆ, ಮೈಸೂರು, ಹುಣಸೂರು,ಮಂಡ್ಯ, ಸರಗೂರು,ಹಾರಂಗಿ, ಕುಶಾಲನಗರ, ಕೆಆರ್​ನಗರದಲ್ಲಿ ಮಳೆಯಾಗಿದೆ. ಕಲಬುರಗಿ ಹಾಗೂ ರಾಯಚೂರಿನಲ್ಲಿ ಗರಿಷ್ಠ ಉಷ್ನಾಂಶ ದಾಖಲಾಗಿದೆ. ಉಳಿದೆಡೆ ಒಣಹವೆ ಮುಂದುವರಿಯಲಿದೆ. ಬಿಸಿಲು ಹೆಚ್ಚಳವಾದಂತೆ ಅಲ್ಲಲ್ಲಿ ಮಳೆಯೂ ಬರಲಿದೆ. ಕೆಲ ಜಿಲ್ಲೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶವೂ ಏರಿಳಿತವಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − one =
Remember me
