ಬೆಂಗಳೂರು:ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಎಚ್ಚರಿಕೆಯಿಂದಿರುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಉಡುಪಿ ಸೇರಿದಂತೆ 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ ಸೇರಿ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಸಂಬಂಧ ವಿಡಿಯೋ ಒಂದನ್ನು ಟ್ವೀಟ್​ ಮಾಡಿದೆ.
ಮಿಂಚು ಮತ್ತು ಗುಡುಗು ಸಿಡಿಲಿನಿಂದ ಎಚ್ಚರ! ಈ ಸಾರ್ವಜನಿಕ ಜಾಗೃತಿ ವಿಡಿಯೋವನ್ನು ವೀಕ್ಷಿಸಿ, ಸುರಕ್ಷತಾ ಕ್ರಮಗಳನ್ನು ತಿಳಿಯಿರಿ.#ಮಿಂಚು_ಎಚ್ಚರಿಕೆ#thunderstorms#lightning#lightningstrikes#LightningStormpic.twitter.com/HvBQ9S3cWN
ಇದನ್ನೂ ಓದಿ:ಭಾರತ-ಪಾಕ್​ ಕದನಕ್ಕೂ ಮುನ್ನ ಮಹತ್ವದ ನಿರ್ಧಾರಕ್ಕೆ ಪ್ರಕಟಿಸಿದ ಐಸಿಸಿ; ಏನದು?
ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲೆಿಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಮಳೆಯಾಗುವ ಸಮಯದಲ್ಲಿ ಎಚ್ಚರವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಈ ಬಗ್ಗೆ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ತಿಳಿಯಿರಿ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಟ್ವೀಟ್ ಮೂಲಕ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
