ಬೆಂಗಳೂರು:ಬಿಸಿಲಿನ ಬೇಗೆಯಿಂದ ಹೈರಾಣಾಗಿದ್ದ ಜನರಿಗೆ ಮಳೆರಾಯ ಕೃಪೆ ತೋರಿದ್ದು, ಕಳೆದ ಕೆಲ ದಿನಗಳಿಂದ ಆಗುತ್ತಿರುವ ಮಳೆ ಜನರಲ್ಲಿ ಸಂತಸ ತಂದಿದೆ. ಆದರೆ, ಕೆಲವೆಡೆ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಹಲವೆಡೆ ಜೀವನ ಅಸ್ತವ್ಯಸ್ತಗೊಂಡಿದೆ. ಇದೀಗ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು (ಮೇ 09) ಕೂಡ ಭಾರೀ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಗುಡುಗು ಸಹಿತ 40 ರಿಂದ 50 ಕೀ.ಮಿ ವೇಗದಲ್ಲಿ ಗಾಳಿಯೊಂದಿಗೆ ಮಳೆ ಬರಲಿದ್ದು, ಎಚ್ಚರವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 17 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 8 ಮಂದಿ ಸಾವು, ಹಲವರು ಗಂಭೀರ
ಗುರುವಾರ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಅದರಂತೆ ಬಳ್ಳಾರಿ, ತುಮಕೂರು, ಚಿತ್ರದುರ್ಗ, ಬೆಂಗಳೂರು, ಕೋಲಾರ, ಚಾಮರಾಜನಗರ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ.
ಮೇ 10 ರಂದು ಬೀದರ್, ಬೆಳಗಾವಿ, ವಿಜಯನಗರ, ಧಾರವಾಡ, ಶಿವಮೊಗ್ಗ, ರಾಯಚೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು, ಮೈಸೂರು, ತುಮಕೂರು, ಕೋಲಾರ, ದಾವಣಗೆರೆ ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ. ಮೇ 13 ರಿಂದ ಮೇ 15ರವರೆಗೆ ಬೀದರ್, ಬೆಳಗಾವಿ, ಕಲಬುರ್ಗಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಾವಣಗೆರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − five =
Remember me
