ಬೆಂಗಳೂರು:ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ಕಳೆದ ಕೆಲ ದಿನಗಳಿಂದ ವರುಣದೇವ ಕೃಪೆ ತೋರುತ್ತಿದ್ದು, ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಆಗುತ್ತಿರುವ ಮಳೆ ಸಂತಸ ತಂದಿದೆ. ಇದೀಗ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್​ ಘೋಷಿಸಿದೆ.
ಅದರಂತೆ ಬೆಂಗಳೂರು, ಮೈಸೂರು, ಕೊಡಗು, ಕೋಲಾರ, ಚಾಮರಾಜನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ ಹಾಗೂ ವಿಜಯನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಳಿದಂತೆ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಇಂದು ಕೂಡ ಮಳೆ ಮುಂದುವರೆಯಲಿದೆ. ಳಿದೆಡೆ ಒಣಹವೆ ಮುಂದುವರಿಯಲಿದೆ. ಬಿಸಿಲು ಹೆಚ್ಚಳವಾದಂತೆ ಅಲ್ಲಲ್ಲಿ ಮಳೆಯೂ ಬರಲಿದೆ. ಕೆಲ ಜಿಲ್ಲೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶವೂ ಏರಿಳಿತವಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 × 3 =
Remember me
