ಮಂಡ್ಯ:ಕಾಂಗ್ರೆಸ್​ನ ಐದು ಗ್ಯಾರಂಟಿಗಳ ಪೈಕಿ ಮೊದಲನೆಯದಾಗಿ ಜಾರಿಗೆ ಬಂದಿರುವ, ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ‘ಶಕ್ತಿ’ ಯೋಜನೆಯಿಂದಾಗಿ ಬಸ್​ ಪ್ರಯಾಣಕ್ಕೆ ನೂಕುನುಗ್ಗಲು ಸೃಷ್ಟಿಯಾಗಿದೆ. ಮೊನ್ನೆಯಷ್ಟೇ ಇಂಥ ನೂಕುನುಗ್ಗಲಿನಿಂದ ಬಸ್​ವೊಂದರ ಡೋರ್ ಕಿತ್ತು ಹೋಗಿದ್ದು, ಇಂದು ಮತ್ತೆ ಅಂಥದ್ದೇ ನೂಕುನುಗ್ಗಲಿನಿಂದಾಗಿ ಮತ್ತೊಂದು ಬಸ್​ನ ಡೋರ್ ಕೂಡ ಕಳಚಿಕೊಂಡಿದೆ.
ಇದನ್ನೂ ಓದಿ:ಉಚಿತ ಪ್ರಯಾಣ ಹೆಚ್ಚು ದಿನ ಇರಲ್ಲ, ಎಲ್ಲೆಲ್ಲಿಗೆ ಹೋಗಬೇಕೋ ಬೇಗ ಹೋಗಿ ಬನ್ನಿ: ಹೀಗಂದಿದ್ಯಾರು, ಯಾಕೆ?
ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಕೆಎಸ್​ಆರ್​​ಟಿಸಿ ಬಸ್​ ನಿಲ್ದಾಣದಲ್ಲಿ ಈ ಪ್ರಕರಣ ನಡೆದಿದೆ. ನಿಲ್ದಾಣಕ್ಕೆ ಬಸ್​ ಬಂದಾಗ ಸೀಟು ಹಿಡಿಯುಲು ಉಂಟಾದ ನೂಕುನುಗ್ಗಲಿನಿಂದಾಗಿ ಬಸ್​ ಡೋರ್ ಕಳಚಿಕೊಂಡಿದೆ. ಬಾಗಿಲು ಕಿತ್ತು ಬಂದ ಕಾರಣ ಪ್ರಯಾಣಿಕರನ್ನು ಕೆಳಗಿಳಿಸಿದ ಸಾರಿಗೆ ಸಿಬ್ಬಂದಿ, ಕಿತ್ತು ಹೋದ ಬಾಗಿಲನ್ನು ಟಿಸಿ ಅವರಿಗೆ ಕಂಡಕ್ಟರ್ ಹಸ್ತಾಂತರಿಸಿದ್ದಾರೆ.
ಇದನ್ನೂ ಓದಿ:ಫ್ರೀ ಅಂತ ಬಂದ ಮಹಿಳೆಯರು ವಾಪಸ್ ಹೋಗಲು ಬಸ್ ಇಲ್ಲದೆ ಪರದಾಟ!
ಮೊನ್ನೆ ಕೊಳ್ಳೇಗಾಲದ ಬಸ್​ ನಿಲ್ದಾಣದಲ್ಲೂ ಇಂಥದ್ದೇ ಘಟನೆ ನಡೆದಿತ್ತು. ಉಚಿತ ಪ್ರಯಾಣಕ್ಕೆ ಮಹಿಳೆಯರು ಶಕ್ತಿ ಮೀರಿ ಮುಂದಾಗಿದ್ದರಿಂದ ಬಸ್​ ಡೋರ್ ಕಳಚಿ ಹೋಗಿದ್ದು, ಕಂಡಕ್ಟರ್ ಡೋರ್ ಹಿಡಿದುಕೊಂಡು ಪರದಾಡುವಂಥ ಪರಿಸ್ಥಿತಿ ಸೃಷ್ಟಿಯಾಗಿತ್ತು. ಉಚಿತ ಬಸ್ ಪ್ರಯಾಣ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ದಿನವೂ ನಾನಾ ಅವಾಂತರಗಳು ಸೃಷ್ಟಿಯಾಗುತ್ತಿವೆ.
ಬಸ್​ ಡೋರೇ ಕಿತ್ತು ಹೋಯ್ತು!; ಉಚಿತ ಪ್ರಯಾಣಕ್ಕಾಗಿ ಮಹಿಳೆಯರ ‘ಶಕ್ತಿ’ ಪ್ರಯೋಗ

‘ನನ್ನಪ್ಪ ಒಬ್ಬ ಬೆಪ್ಪ.. ನಾನೂ ಬೆಪ್ಪ..’: ಆತ್ಮಾವಲೋಕನ ರೀತಿಯಲ್ಲಿ ಹ್ಯಾಪಿ ಫಾದರ್ಸ್ ಡೇ ವಿಷ್ ಮಾಡಿದ ನಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 17 =
Remember me
