ಬೆಂಗಳೂರು:ರಾಜಧಾನಿ ಬೆಂಗಳೂರಿನ ಜನರು ನಾಳೆ ಅಂಥ ಅಗತ್ಯವಿದ್ದರೆ ಮಾತ್ರ ರಸ್ತೆಗಿಳಿಯಿರಿ. ಏಕೆಂದರೆ ನಾಳೆ ಹೆಚ್ಚೂಕಮ್ಮಿ ಅರ್ಧ ಬೆಂಗಳೂರಿಗೇ ಬಿಗಿ ಭದ್ರತೆ ಇರಲಿದೆ. ಮಾತ್ರವಲ್ಲ, ನಗರದ ಹಲವೆಡೆ ಸಂಚಾರ ನಿರ್ಬಂಧ ಇರಲಿದ್ದು, ಕಟ್ಟುನಿಟ್ಟಿನ ನಿಯಮ ಪಾಲನೆ ಆಗಲಿದೆ.
ಸಿಲಿಕಾನ್ ಸಿಟಿಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಬರುವ ಹಿನ್ನೆಲೆಯಲ್ಲಿ ನಗರದ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜತೆಗೆ ಪ್ರಧಾನಿ ಸುಗಮ ಸಂಚಾರ ಮತ್ತು ಭದ್ರತೆ ಸಲುವಾಗಿ ಸಾರ್ವಜನಿಕ ವಾಹನ ಸಂಚಾರ ಮಾರ್ಗ ಮಾರ್ಪಾಡು ಮಾಡಿ ಪರ್ಯಾಯ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಲ್ಪಿಸಿದೆ.
ಬೆಳಗ್ಗೆ 11.55ಕ್ಕೆ ಯಲಹಂಕ ವಾಯುನೆಲೆಗೆ ಬಂದಿಳಿಯುವ ಪ್ರಧಾನಿ ಭಾರತೀಯ ವಿಜ್ಞಾನ ಸಂಸ್ಥೆ, ಜ್ಞಾನಭಾರತಿ ಆವರಣದಲ್ಲಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್​ ಎಕನಾಮಿಕ್ ಮತ್ತು ಕೊಮ್ಮಘಟ್ಟದ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ಸಂಚರಿಸುವ ಮತ್ತು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ 10 ಸಾವಿರಕ್ಕೂ ಅಧಿಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಂಗಳೂರು ನಗರ ಪೊಲೀಸ್, ಸಿಐಡಿ, ಕೆಎಸ್‌ಆರ್‌ಪಿ, ಸಿಎಆರ್, ಗರುಡ ಪಡೆಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಪ್ರಧಾನಿ ಸಂಚರಿಸುವ ಮಾರ್ಗ ಉದ್ದಕ್ಕೂ ಪೊಲೀಸರನ್ನು ಭಾನುವಾರವೇ ಸಂಚಾರ ಮತ್ತು ಸಿವಿಲ್ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ವಿರುದ್ಧ ದೇಶವ್ಯಾಪಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಯೂ ಪ್ರಧಾನಿ ಬಂದಾಗ ಪ್ರತಿಭಟನೆ ನಡೆಸುವ ಸಾಧ್ಯತೆ ಇರುವ ಬಗ್ಗೆ ಗುಪ್ತಚರ ಇಲಾಖೆ ವರದಿ ನೀಡಿದೆ. ಇದರ ಆಧಾರದ ಮೇಲೆ ಅಗತ್ಯ ಇರುವ ಕಡೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 3 =
Remember me
