ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಕಳೆದರೆಡು ದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ಮಲೆನಾಡು ಪ್ರದೇಶದಲ್ಲಿ ಗುಡ್ಡ ಕುಸಿತವಾಗುತ್ತಿದ್ದು, ಸುರಕ್ಷತೆ ದೃಷ್ಟಿಯಿಂದ ಆಗುಂಬೆ ಘಾಟಿಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಡಳಿತ ಶುಕ್ರವಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಉಡುಪಿಯಲ್ಲಿ ಗಗನಸಖಿ ಸೇರಿ ನಾಲ್ವರ ಕೊಲೆ ಕೇಸ್:​ ಆರೋಪಿ ಜಾಮೀನು ಅರ್ಜಿ ತಿರಸ್ಕೃತ!
ನಿರಂತರ ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಜೂ.27ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಬದಲಿ ಮಾರ್ಗ ಸೂಚಿಸಿ ಶಿವಮೊಗ್ಗ ಡಿಸಿ ಆದೇಶ ಹೊರಡಿಸಿದ್ದಾರೆ. ಬದಲಿ ಮಾರ್ಗವನ್ನು ಗುರುತಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ನೀಡಿದ್ದಾರೆ.
ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂ.27ರಿಂದ ಸೆ.15ರವರೆಗೆ ಭಾರೀ ವಾಹನ ಸಂಚರಿಸದಂತೆ ಆದೇಶಿಸಲಾಗಿದೆ. ತೀರ್ಥಹಳ್ಳಿಯಿಂದ ಉಡುಪಿಗೆ ಹೋಗುವ ಭಾರೀ ವಾಹನಗಳು ತೀರ್ಥಹಳ್ಳಿ -ಮಾಸ್ತಿಕಟ್ಟೆ- ಸಿದ್ದಾಪುರ-ಕುಂದಾಪುರ ಮೂಲಕ ಉಡುಪಿ ತಲುಪಬಹುದು. ಉಡುಪಿಯಿಂದ ತೀರ್ಥಹಳ್ಳಿ ಬರುವವರು ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ ಮೂಲಕ ತೀರ್ಥಹಳ್ಳಿಗೆ ಸಂಚರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚುವರಿ ಡಿಸಿಎಂ ಹುದ್ದೆ: ಹೈಕಮಾಂಡ್‌ ಬಳಿ ಹೋಗಿ ಮಾತನಾಡಲಿ ಎಂದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − ten =
Remember me
