
ಬೆಂಗಳೂರು:ಹೆಬ್ಬಾಳದ ಅಕ್ರಮ ಗುರುತು ಚೀಟಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಚುನಾವಣಾ ಆಯೋಗವನ್ನು ಬಿಜೆಪಿ ನಿಯೋಗ ಒತ್ತಾಯಿಸಿದೆ.ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ನೇತೃತ್ವದ ನಿಯೋಗವು ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದು, ಪ್ರಕರಣದ ಸಮಗ್ರ ತನಿಖೆಗೆ ಶಿಫಾರಸು ಮಾಡುವಂತೆ ಕೋರಿದೆ.ಎಂಎಸ್‌ಎಲ್ ಟೆಕ್ನೊ ಸೊಲ್ಯೂಶನ್ಸ್‌ನಲ್ಲಿ ಮತದಾರರ ನಕಲಿ ಗುರುತು ಚೀಟಿ ಸಿದ್ಧಪಡಿಸಿ ನೀಡಲಾಗಿರುವುದು ರಾಷ್ಟ್ರೀಯ ಭದ್ರತೆ ಸಂಬಂಧಿಸಿ ಆತಂಕಕಾರಿ ವಿಚಾರ ಎಂದು ನಿಯೋಗ ತಿಳಿಸಿದೆ.ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದ್ದು, ಎನ್‌ಐಎ ತನಿಖೆಗೆ ವಹಿಸುವುದೂ ಸೂಕ್ತ ಎಂದಿದೆ.ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎ್ಐಆರ್ ಪ್ರಕಾರ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸ್ ಇನ್ಸ್‌ಸ್ಪೆಕ್ಟರ್ ಅವರು ಅ.19ರಂದು ಆರ್‌ಟಿ ನಗರದ ಸುಲ್ತಾನ ಪಾಳ್ಯ ಬನಶಂಕರಿ ಕಾಂಪ್ಲೆಕ್ಸ್‌ನ ಎಂಎಸ್‌ಎಲ್ ಟೆಕ್ನೊ ಸೊಲ್ಯೂಶನ್ಸ್‌ನಲ್ಲಿ ಗುರುತಿನ ಚೀಟಿಗಳನ್ನು ಸಿದ್ಧಪಡಿಸಲಾಗುತ್ತಿತ್ತು ಎಂದು ತಿಳಿಸಿರುವುದು ಗಂಭೀರವಾದದ್ದು ಮನವಿಯಲ್ಲಿ ತಿಳಿಸಲಾಗಿದೆ.ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಾನ್ ಕಾರ್ಡ್ ಮತ್ತಿತರ ದಾಖಲಾತಿಗಳನ್ನು ತಮ್ಮ ಅಂಗಡಿಯ ಕಂಪ್ಯೂಟರ್‌ನಲ್ಲಿ ನಕಲಿ ಸೃಷ್ಟಿ ಮಾಡಿ ತಮ್ಮ ಸ್ವಂತ ಲಾಭಕ್ಕಾಗಿ ಸಾರ್ವಜನಿಕರಿಗೆ, ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾದವರಿಗೆ ಸಹಕರಿಸುತ್ತಿದ್ದರು. ನಿಜವಾದ ಗುರುತಿನ ಚೀಟಿಗಳೆಂದು ಹೆಚ್ಚಿನ ಹಣಕ್ಕೆ ನೀಡಿ ಸಾರ್ವಜನಿಕರಿಗೆ ಮೋಸ ಮಾಡಲಾಗಿದೆ ಎಂದು ತಿಳಿಸಲಾಗಿದೆ.ಎಂಎಸ್‌ಎಲ್ ಟೆಕ್ನೊ ಸೊಲ್ಯೂಶನ್ಸ್ ಮಾಲೀಕ ಮೌನೇಶ್ ಕುಮಾರ್ ಹಾಗೂ ಈತನ ಕೃತ್ಯಕ್ಕೆ ಸಹಕರಿಸಿದ ಭಗತ್, ರಾಘವೇಂದ್ರ ವಿರುದ್ಧ ಎ್ಐಆರ್ ದಾಖಲಾಗಿದೆ. ನಕಲಿ ಮತದಾರರ ಗುರುತು ಚೀಟಿ ಸಿದ್ಧಪಡಿಸುವುದು ಅಪರಾಧ. ರಾಷ್ಟ್ರೀಯ ಭದ್ರತೆಯ ವಿರುದ್ಧ ನಡೆದ ಕುಕೃತ್ಯ ಇದಾಗಿದೆ ಎಂದು ನಿಯೋಗ ಆಯೋಗದ ಗಮನ ಸೆಳೆದಿದೆ.ನಿಯೋಗದಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಮುಖಂಡ ಭಾಸ್ಕರ ರಾವ್, ವಕೀಲರ ಸಂಘದ ಅಧ್ಯಕ್ಷ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ ಮತ್ತು ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ಯೋಗೇಂದ್ರ ಹೂಡಘಟ್ಟ, ಹೆಬ್ಬಾಳ ಮುಖಂಡರಾದ ಕಟ್ಟಾ ಜಗದೀಶ್ ಮತ್ತಿತರರಿದ್ದರು.
ಪೋಟೋ: ಬಿಜೆಪಿ1
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 10 =
Remember me
