ಬೆಂಗಳೂರು:ರಾಜ್ಯದಲ್ಲಿ ಇನ್ಮುಂದೆ ದ್ವಿಚಕ್ರವಾಹನಗಳಲ್ಲಿ ಸಂಚರಿಸುವ ನಾಲ್ಕು ವರ್ಷ ಮೇಲ್ಪಟ್ಟ ಎಲ್ಲರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಈ ನಿಯಮ ಪಾಲಿಸದಿದ್ದಲ್ಲಿ ವಾಹನ ಚಾಲಕರ ಚಾಲನಾ ಪರವಾನಗಿ(ಡಿಎಲ್)3 ತಿಂಗಳವರೆಗೆ ಅಮಾನತುಗೊಳ್ಳಲಿದೆ. ಸುಪ್ರೀಂಕೋರ್ಟ್​ನ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ.
ಹೊಸತಲ್ಲ: ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 129ರ ಪ್ರಕಾರ ದ್ವಿಚಕ್ರವಾಹನ ಸವಾರರ ಜತೆಗೆ ಹಿಂಬದಿ ಸವಾರರೂ ಹೆಲ್ಮೆಟ್ ಧರಿಸುವುದು ಕಡ್ಡಾಯ. ದ್ವಿಚಕ್ರವಾಹನದಲ್ಲಿ ಪ್ರಯಾಣಿಸುವ ನಾಲ್ಕು ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ನಿಯಮವಿತ್ತಾದರೂ ಕಟ್ಟುನಿಟ್ಟಾಗಿ ಜಾರಿಯಾಗಿರಲಿಲ್ಲ. ಇನ್ಮುಂದೆ ಈ ನಿಯಮವನ್ನೂ ಪಾಲಿಸುವಂತೆ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ದಂಡಂ ದಶಗುಣಂ: ಸುಪ್ರೀಂಕೋರ್ಟ್ ರಸ್ತೆ ಸುರಕ್ಷತಾ ಸಮಿತಿ ರಾಜ್ಯ ಸರ್ಕಾರಕ್ಕೆ ಮತ್ತೊಂದು ನಿರ್ದೇಶನ ನೀಡಿದೆ. ದ್ವಿಚಕ್ರವಾಹನ ಸವಾರರು ಹೆಲ್ಮೆಟ್ ಧರಿಸದೆ ಸಂಚರಿಸುತ್ತಿರುವ ಪರಿಣಾಮ ರಸ್ತೆ ಅಪಘಾತಗಳ ಸಂದರ್ಭದಲ್ಲಿ ಸಾವು, ನೋವಿನ ಸಂಖ್ಯೆ ಹೆಚ್ಚುತ್ತಿದೆ. ಇದನ್ನು ತಡೆಗಟ್ಟಲು ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 129 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 230(1)ವನ್ನು ಉಲ್ಲಂಘಿಸಿ ಸಂಚರಿಸುವ ವಾಹನ ಸವಾರರಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 194ಡಿ ಅನ್ವಯ ದಂಡ ವಸೂಲಿ ಮಾಡಬೇಕು. ಅದರ ಜತೆಗೆ ಸವಾರರ ಚಾಲನಾ ಪರವಾನಗಿಯನ್ನು ಕನಿಷ್ಠ ಮೂರು ತಿಂಗಳ ಅವಧಿಗೆ ಅಮಾನತುಗೊಳಿಸಬೇಕೆಂದು ಸಮಿತಿ ನಿರ್ದೇಶಿಸಿದೆ.
ನಿಯಮ ಉಲ್ಲಂಘನೆ ವಿರುದ್ಧ ದಂಡ ವಸೂಲಿ ಸೇರಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿ ತಿಂಗಳ 5ನೇ ತಾರೀಖಿನೊಳಗೆ ದಾಖಲಿಸಿದ ಪ್ರಕರಣಗಳ ಸಂಖ್ಯೆ, ಪೊಲೀಸ್ ಠಾಣೆಗಳಿಂದ ಬಂದ ಪ್ರಕರಣಗಳ ಸಂಖ್ಯೆ ಹಾಗೂ ಅಮಾನತುಪಡಿಸಿದ ಚಾಲನಾ ಪರವಾನಗಿಗಳ ಸಂಖ್ಯೆಯನ್ನು ಜಂಟಿ ಸಾರಿಗೆ ಆಯುಕ್ತರು ಹಾಗೂ ಅಪರ ಸಾರಿಗೆ ಆಯುಕ್ತರಿಗೆ ಸಲ್ಲಿಸಲು ತಿಳಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − three =
Remember me
