ಬೆಂಗಳೂರು:ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ ತಿಂಗಳು ನಡೆಸಿದ್ದ ಸಿಇಟಿ ಫಲಿತಾಂಶವು ಜೂನ್ 12 ಅಥವಾ 14ರಂದು ಪ್ರಕಟವಾಗುವ ಸಾಧ್ಯತೆಗಳಿವೆ.
ಈ ಬಾರಿಯ ಸಿಇಟಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು ಪ್ರಸ್ತುತ ಸಿಇಟಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಎರಡನ್ನೂ ಆಧರಿಸಿ ರ‌್ಯಾಂಕ್ ಪಟ್ಟಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ರ‌್ಯಾಂಕ್ ಪಟ್ಟಿ ಬಹುತೇಕ ಸಿದ್ಧವಾಗಲಿದೆ.
ಇದನ್ನೂ ಓದಿ:ಪ್ರತಿ ಮನೆಗೂ ಉಚಿತ ವಿದ್ಯುತ್, ಗೃಹಜ್ಯೋತಿ ಯೋಜನೆ ಜಾರಿಗೂ ಆದೇಶ: ಷರತ್ತುಗಳ ವಿವರ ಇಲ್ಲಿದೆ..
ಈ ತಾಂತ್ರಿಕ ಕೆಲಸಗಳು ಮುಗಿದ ಬಳಿಕ ಜೂ.12 ಅಥವಾ 14ರಂದು ಫಲಿತಾಂಶ ಪ್ರಕಟಿಸಲು ಚರ್ಚೆ ನಡೆದಿದೆ. ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ದಿನಾಂಕವನ್ನು ಶೀಘ್ರ ಅಂತಿಮಗೊಳಿಸುವುದಾಗಿ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಮಾಹಿತಿ ನೀಡಿದ್ದಾರೆ. ಕಳೆದ ಮೇ 20ರಿಂದ 22ರವರೆಗೆ ನಡೆದಿದ್ದ ಸಿಇಟಿ-2023ಕ್ಕೆ 2.39 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.
ಸಿದ್ದರಾಮಯ್ಯ ಕುರಿತು ಹನಿಗವಿಯ ವರ್ಷದ ಹಿಂದಿನ ತಮಾಷೆ ನಿಜವಾಯಿತು!

ಮುಂದಿನ ಒಂದು ವರ್ಷದಲ್ಲಿನ ಉಚಿತ ಚಿಕಿತ್ಸೆಗೆಂದೇ 65 ಕೋಟಿ ರೂ. ಮೀಸಲು: ಅಮೃತ ಆಸ್ಪತ್ರೆ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:thirteen − 12 =
Remember me
