ಬೆಂಗಳೂರು:ಹತ್ಯೆಗೊಳಗಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರನ್ನು ನೂತನ ಸರ್ಕಾರ ಕೆಲಸದಿಂದ ವಜಾಗೊಳಿಸಿದ್ದ ವಿಚಾರ ವಿವಾದಾತ್ಮಕವಾಗಿ ಪರಿಣಮಿಸಿದೆ. ಇದರ ಬೆನ್ನಿಗೇ ಈ ವಿಷಯಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ.
ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ ನೂತನಕುಮಾರಿ ಅವರನ್ನು ಕೆಲಸದಿಂದ ವಜಾಗೊಳಿಸಿದ್ದ ವಿಚಾರವಾಗಿ ಬಿಜೆಪಿಯ ನಾಯಕರು ಹಾಗೂ ಕಾರ್ಯಕರ್ತರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಮಾತ್ರವಲ್ಲ, ಇದು ದ್ವೇಷದ ರಾಜಕಾರಣ ಎಂದು ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ:ಕಾಡಾನೆ ತುಳಿತಕ್ಕೆ ಮಹಿಳೆ ಬಲಿ; ಯಾರಿಗೂ ಗೊತ್ತಾಗದಂತೆ ಶವ ಕೊಂಡೊಯ್ಯಲು ಅಧಿಕಾರಿಗಳ ತಾಕೀತು?
‘ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ, ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಪ್ರಕಟಿಸಿದ್ದಾರೆ.
ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

ಕುಸ್ತಿಪಟುಗಳ ಪರ ದನಿ ಎತ್ತಿದ ಬಾಬಾ ರಾಮದೇವ್; ಬ್ರಿಜ್​​ಭೂಷಣ್​ ಶರಣ್ ಸಿಂಗ್ ಬಂಧನಕ್ಕೆ ಆಗ್ರಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + eighteen =
Remember me
