ಬೆಂಗಳೂರು:ಸತತ 18 ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿದ್ದ ಮುಂಗಾರು ಮಳೆ ಕೊನೆಗೂ ಬಿಡುವು ಕೊಟ್ಟಿದೆ. ಮಂಗಳವಾರ ಹಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಿದೆ. ಮುಂದಿನ 4 ದಿನ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರಿಂದ ಮಳೆಯಿಂದ ರೋಸಿ ಹೋಗಿದ್ದ ಜನರು ತುಸು ನಿರಾಳರಾಗಿದ್ದಾರೆ.
ಜೂ 1ರಿಂದ ಜು.19ರವರೆಗೆ ರಾಜ್ಯಾದ್ಯಂತ 365 ಮಿಮೀ ಮಳೆಯಾಗಬೇಕಿತ್ತು. ಆದರೆ, 462 ಮಿಮೀ ಮಳೆಯಾಗಿದ್ದು, ಶೇ.27 ವಾಡಿಕೆಗಿಂತ ಹೆಚ್ಚು ಬಿದ್ದಿದೆ. ದಕ್ಷಿಣ ಒಳನಾಡಿನಲ್ಲಿ ಶೇ.76, ಉತ್ತರ ಒಳನಾಡಿನಲ್ಲಿ ಶೇ.21, ಮಲೆನಾಡಿನಲ್ಲಿ ಶೇ. 25 ಹಾಗೂ ಕರಾವಳಿಯಲ್ಲಿ ಶೇ.21 ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ಜೂನ್‌ನಲ್ಲಿ ಮಳೆ ಕೊರತೆ ಉಂಟಾಗಿದ್ದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಜುಲೈನಲ್ಲಿ ಭಾರಿ ಮಳೆಯಾಗಿದೆ.
ಸೆಖೆ ಅನುಭವ:ನಿರಂತರ ಮಳೆಯಿಂದ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಕುಸಿತ ಪರಿಣಾಮ ಚಳಿ ಅನುಭವವಾಗುತ್ತಿದ್ದ ಬೆಂಗಳೂರು ಸೇರಿ ಹಲವು ಭಾಗಗಳಲ್ಲಿ ಇದೀಗ ಸೆಖೆ ವಾತಾವರಣ ಸೃಷ್ಟಿಯಾಗಿದೆ.
ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
