ಬೆಂಗಳೂರು: ಕರೊನಾ ಸೋಂಕು ಹರಡುವಿಕೆ ತಡೆಯಲು ವಿವಿಧ ಕೆಟಗರಿಯ ಮಾಸ್ಕ್, ಪಿಪಿಇ ಕಿಟ್, ಸ್ಯಾನಿಟೈಸರ್ ಹಾಗೂ ವೆಂಟಿಲೇಟರ್​ಗಳ ಬೇಡಿಕೆಗೆ ಅನುಗುಣವಾಗಿ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ವೈರಸ್ ಹರಡುವಿಕೆ ತಡೆಯಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಸಲ್ಲಿಕೆಯಾಗಿ ರುವ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯ ಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ, ಈ ನಿರ್ದೇಶನ ನೀಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡಿಸಿ, 2.40 ಲಕ್ಷ ಎನ್-95 ಮಾಸ್ಕ್, 6.94 ಲಕ್ಷ ಟ್ರಿಪಲ್ ಲೇಯರ್ ಮಾಸ್ಕ್, 53 ಸಾವಿರ ಪಿಪಿಇ ಕಿಟ್​ಗಳು ಕರ್ನಾಟಕ ಡ್ರಗ್ ಲಾಜಿಸ್ಟಿಕ್ ಆಂಡ್ ವೇರ್​ಹೌಸಿಂಗ್ ಸೊಸೈಟಿಯಲ್ಲಿ ದಾಸ್ತಾನು ಮಾಡಲಾಗಿದೆ. 324 ವೆಂಟಿಲೇಟರ್, 18.33 ಲಕ್ಷ ಎನ್-95 ಮಾಸ್ಕ್, 54 ಲಕ್ಷ ಟ್ರಿಪಲ್ ಲೇಯರ್ ಮಾಸ್ಕ್, 10 ಲಕ್ಷ ಪಿಪಿಇ ಕಿಟ್ಸ್, 25 ಸಾವಿರ ಹ್ಯಾಂಡ್ ಸ್ಯಾನಿಟೈಸರ್ ಬಾಟಲ್​ಗಳ ಖರೀದಿಗೆ ಆದೇಶ ಹೊರಡಿಸಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಸ್ಪಷ್ಟ ಚಿತ್ರಣ ಕೇಳಿದ ಕೋರ್ಟ್:ಕೋವಿಡ್ ಚಿಕಿತ್ಸೆಗೆ ನಿಗದಿಪಡಿಸಿರುವ ಕಲಬುರಗಿಯ ಇಎಸ್​ಐ ಆಸ್ಪತ್ರೆ ಸಿಬ್ಬಂದಿಗೆ ಮಾಸ್ಕ್​ಗಳನ್ನೂ ನೀಡಲಾಗಿಲ್ಲ ಎಂದು ಆಸ್ಪತ್ರೆಯ ಡಾ. ಝೀನತ್ ಹೈಕೊರ್ಟ್​ಗೆ ಇ-ಮೇಲ್ ಕಳುಹಿಸಿದ್ದಾರೆ. ಮಾಸ್ಕ್, ಗ್ಲೌವ್ಸ್, ಸ್ಯಾನಿಟೈಸರ್ ಒದಗಿಸಿಲ್ಲ ಎಂದು ಬೀದರ್ ಜಿಲ್ಲೆಯ ಚೆಕ್​ಪೋಸ್ಟ್​ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಹಾಯಕಿಯರೂ ಇ-ಮೇಲ್ ಮಾಡಿದ್ದಾರೆ. ಹೀಗಿರುವಾಗ ಸರ್ಕಾರ ತನ್ನ ಬಳಿ ಎಷ್ಟು ಲಭ್ಯವಿದೆ, ಎಷ್ಟು ಖರೀದಿಗೆ ಆದೇಶ ಹೊರಡಿಸಲಾಗಿದೆ ಎಂದಷ್ಟೇ ಹೇಳಿದೆ. ಆದರೆ, ಇರುವ ಬೇಡಿಕೆ, ಅದಕ್ಕನುಗುಣವಾಗಿ ಯಾವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲವೆಂದು ಪೀಠ ಬೇಸರ ವ್ಯಕ್ತಪಡಿಸಿತು. ಈ ಬಗ್ಗೆ ಸ್ಪಷ್ಟ ಚಿತ್ರಣ ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
2,658 ಐಸೋಲೇಷನ್ ಬೆಡ್​ಗಳು:ರಾಜ್ಯದಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಸೇರಿ ಒಟ್ಟು 537 ಐಸೊಲೇಷನ್ ಆಸ್ಪತ್ರೆಗಳನ್ನು ಗುರುತಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 1,114, ಖಾಸಗಿ ಆಸ್ಪತ್ರೆಗಳಲ್ಲಿ 1,544 ಸೇರಿ ಒಟ್ಟು 2,658 ಐಸೊಲೇಷನ್ ಬೆಡ್​ಗಳನ್ನು ಕಾಯ್ದಿರಿಸಲಾಗಿದೆ. ಬೆಂಗಳೂರಿನಲ್ಲೇ 862 ಐಸೊಲೇಷನ್ ಬೆಡ್​ಗಳಿವೆ. ವೆಂಟಿಲೇಟರ್ ವ್ಯವಸ್ಥೆ ಹೊಂದಿರುವ 740 ಐಸಿಯು ಬೆಡ್​ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 8 ಜಿಲ್ಲಾ ಲ್ಯಾಬ್​ಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗಿದೆ.ಎಂದು ಸರ್ಕಾರ ತಿಳಿಸಿದೆ.
ದಾಖಲೆಗಳ ಪರಿಶೀಲನೆಗಾಗಿ ಕೆಪಿಎಸ್​ಸಿಗೆ ಸೀಮಿತ ಅವಕಾಶ

ಸೂಪರ್ ಲವ್ ಸ್ಟೋರಿ!: ಸಿನಿಮಾವನ್ನೂ ಮೀರಿದ ಕಥೆ ಈಕೆಯದ್ದು..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × three =
Remember me
