ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ 2019ರ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಗಲಭೆಗೆ ಕಾರಣರಾದವರು ಎಂದು ಆರೋಪಿಸಿ ಪೊಲೀಸರು ಬಂಧಿಸಿದ್ದವರ ಪೈಕಿ 22 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಮೊಹಮದ್ ಶಕೀರ್, ನಾಸಿರುದ್ದೀನ್ ಸೇರಿ 22 ಮಂದಿ ಸಲ್ಲಿಸಿದ್ದ ಅರ್ಜಿಗಳನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ, ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯುಕ್ತಿಕ ಬಾಂಡ್, ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿ ಸಲ್ಲಿಸಬೇಕು. ಪ್ರಕರಣದ ವಿಚಾರಣೆಗೆ ಹಾಜರಾಗಬೇಕು, ಸಾಕ್ಷ್ಯ ನಾಶಪಡಿಸಬಾರದು, ಅನುಮತಿ ಇಲ್ಲದೆ ವಿಚಾರಣಾ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಬಾರದು ಎಂಬ ಷರತ್ತುಗಳನ್ನು ವಿಧಿಸಿದೆ.
ಪ್ರಕರಣದಲ್ಲಿ 1500ರಿಂದ 2000ರವರೆಗೆ ಮುಸ್ಲಿಂ ಯುವಕರು ಅಕ್ರಮ ಕೂಟ ಸೇರಿದ್ದರು. ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಮತ್ತು ಸಾರ್ವಜನಿಕ ಆಸ್ತಿ ನಷ್ಟ ಮಾಡಲು ಸಂಚು ರೂಪಿಸಿದ್ದರು. ಅವರು ಕೋಲು, ಸೋಡಾ ಬಾಟಲ್ ಮತ್ತು ಕಲ್ಲುಗಳನ್ನು ಕೈಯಲ್ಲಿ ಹಿಡಿದಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಒಂದು ಅಪರಾಧ ಕೃತ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಆರೋಪಿಗಳು ಭಾಗವಹಿಸಿದ್ದರೆ, ಪ್ರತಿ ಆರೋಪಿ ಗುರುತು ಹಾಗೂ ಪಾಲ್ಗೊಂಡಿರುವಿಕೆಯನ್ನು ಸಕಾರಣಗಳೊಂದಿಗೆ ನಿಶ್ಚಿತವಾಗಿ ಹೊರಿಸಬೇಕು. ಆದರೆ, ಅರ್ಜಿದಾರರ ವಿರುದ್ಧ ಅಂಥ ಯಾವುದೇ ಸಾಕ್ಷ್ಯಾಧಾರ ಲಭ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು, ಅರ್ಜಿದಾರರು ಮುಸ್ಲಿಂ ಸಮುದಾಯದವರು ಹಾಗೂ ಪಿಐಎಫ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದವರು ಎಂಬ ಕಾರಣಕ್ಕೆ ಆರೋಪಿಗಳನ್ನಾಗಿ ಸೇರಿಸಲಾಗಿದೆ ಎಂಬುದನ್ನು ಸೂಚಿಸುತ್ತಿವೆ. ಪ್ರಕರಣದಲ್ಲಿ ಅರ್ಜಿದಾರರು ಭಾಗವಹಿಸಿರುವುದು ಸಿಸಿ ಕ್ಯಾಮರಾ ದೃಶ್ಯವಳಿ ಮತ್ತು ಫೋಟೋಗಳಿಂದ ತಿಳಿದುಬಂದಿದೆ ಎಂದು ಹೇಳಲಾಗಿದ್ದರೂ, ಅರ್ಜಿದಾರರು ಮಾರಕಾಸ್ತ್ರಗಳೊಂದಿಗೆ ಸ್ಥಳದಲ್ಲಿರುವುದನ್ನು ಸಾಬೀತುಪಡಿಸುವುದಕ್ಕೆ ಪೂರಕ ದಾಖಲೆಗಳನ್ನು ಒದಗಿಸಿಲ್ಲ ಎಂದು ಕೋರ್ಟ್ ಹೇಳಿದೆ.
ಪೊಲೀಸರಿಂದಲೇ ಕಲ್ಲು ತೂರಾಟ
ತನಿಖಾಧಿಕಾರಿಗಳು ಸಂಗ್ರಹಿಸಿರುವ ಸಾಕ್ಷ್ಯಗಳಲ್ಲಿ ಅರ್ಜಿದಾರರು ಘಟನಾ ಸ್ಥಳದಲ್ಲಿದ್ದರು ಎಂಬುದಕ್ಕೆ ನಿರ್ದಿಷ್ಟ ಸಾಕ್ಷ್ಯಲ್ಲ. ಪೊಲೀಸರು ಒದಗಿಸಿರುವ ಫೋಟೋಗಳಲ್ಲಿ ಬಾಟಲ್ ಹಿಡಿದು ನಿಂತಿರುವ ಒಬ್ಬ ವ್ಯಕ್ತಿ ಹೊರತುಪಡಿಸಿ, ಬೇರೆ ಯಾರೂ ಮಾರಕಾಸ್ತ್ರಗಳನ್ನು ಹಿಡಿದಿರುವುದು ಕಂಡುಬಂದಿಲ್ಲ. ಅರ್ಜಿದಾರರು ಸಲ್ಲಿಸಿರುವ ಫೋಟೋಗಳಲ್ಲಿ ಪೊಲೀಸರೇ ಜನರ ಗುಂಪಿನ ಮೇಲೆ ಕಲ್ಲು ತೂರುತ್ತಿರುವುದು ಕಂಡುಬಂದಿದೆ. ಪೊಲೀಸರು ತಮ್ಮ ತಪ್ಪುಗಳನ್ನು ಮುಚ್ಚಿಡುವ ನಿಟ್ಟಿನಲ್ಲಿ ಅಮಾಯಕ ವ್ಯಕ್ತಿಗಳನ್ನು ಉದ್ದೇಶಪೂರ್ವಕವಾಗಿ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂಬುದನ್ನು ತೋರಿಸುತ್ತಿದೆ ಎಂದು ನ್ಯಾಯಾಲಯ ಹೇಳಿದೆ. ಗೋಲಿಬಾರ್​ನಿಂದ ಸಾವನ್ನಪ್ಪಿದ ವ್ಯಕ್ತಿಗಳ ವಿರುದ್ಧವೇ ಎಫ್​ಐಆರ್ ದಾಖಲಿಸಿರುವುದು ಪೊಲೀಸರ ಅತಿರೇಕದ ವರ್ತನೆಗೆ ಸಾಕ್ಷಿಯಾಗಿದೆ. ಸಾಕ್ಷ್ಯ ತಿರುಚುವ ಮೂಲಕ ಉದ್ದೇಶಪೂರ್ವಕವಾಗಿ ಅರ್ಜಿದಾರರ ಸ್ವಾತಂತ್ರ್ಯ ಹಾಗೂ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 12 =
Remember me
