ಬೆಂಗಳೂರು:ರಾಜ್ಯದ ಮಾಜಿ-ಹಾಲಿ ಸಂಸದರು ಮತ್ತು ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದು ಸರ್ಕಾರ ಹೊರಡಿಸಿರುವ ಆದೇಶಗಳ ಪರಿಶೀಲನೆಗೆ ಮುಂದಾಗಿರುವ ಹೈಕೋರ್ಟ್, 2020ರ ಸೆ.16ರ ನಂತರ ಹೊರಡಿಸಿರುವ ಎಲ್ಲ ಆದೇಶಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ. ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದ ಮೇರೆಗೆ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ರಾಜ್ಯದಲ್ಲಿ 2020ರ ಸೆ.16ರ ನಂತರ ಹಾಲಿ ಹಾಗೂ ಮಾಜಿ ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದು ಹೊರಡಿಸಿರುವ ಎಲ್ಲ ಆದೇಶಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸರ್ಕಾರ ಆ.31ರೊಳಗೆ ಒದಗಿಸಬೇಕು ಎಂದು ನಿರ್ದೇಶಿಸಿದ ಪೀಠ, ಈ ಆದೇಶಗಳ ಸಿಂಧುತ್ವವನ್ನು ‘ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಆಯಾ ರಾಜ್ಯಗಳ ಹೈಕೋರ್ಟ್ ಅನುಮತಿ ಇಲ್ಲದೇ ಸರ್ಕಾರಗಳು ಹಿಂಪಡೆಯುವಂತಿಲ್ಲ’ ಎಂದು ಆ.10ರಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಅನುಸಾರ ಪರಿಶೀಲಿಸಲಾಗುವುದು ಎಂದು ಹೇಳಿತು. ಪ್ರಕರಣದಲ್ಲಿ ಅಮಿಕಸ್ ಕ್ಯೂರಿಯಾಗಿರುವ ಹಿರಿಯ ವಕೀಲ ಆದಿತ್ಯ ಸೋಂಧಿ ಮಾಹಿತಿ ನೀಡಿ, ಜನಪ್ರತಿನಿಧಿಗಳ ವಿರುದ್ಧದ ಮ್ಯಾಜಿಸ್ಟ್ರೇಟ್ ಕೋರ್ಟ್​ಗಳಲ್ಲಿ ವಿಚಾರಣೆಗೆ ಒಳಪಡುವ ಪ್ರಕರಣಗಳ ಸಂಬಂಧ ವಿಶೇಷ ಕೋರ್ಟ್​ಗಳ ನ್ಯಾಯವ್ಯಾಪ್ತಿ ಕುರಿತು ಸುಪ್ರೀಂಕೋರ್ಟ್ ಆ.25ರಂದು ವಿಚಾರಣೆ ನಡೆಸಲಿದೆ ಎಂದರು. ಅದನ್ನು ಪರಿಗಣಿಸಿದ ಪೀಠ, ಸುಪ್ರೀಂಕೋರ್ಟ್ ವಿಚಾರಣೆ ಬಳಿಕ ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿತು. ಜತೆಗೆ, ಕಾಗ್ನಿಜಬಲ್ ಪ್ರಕರಣಗಳನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ಗಳಿಂದ ವಿಶೇಷ ಕೋರ್ಟ್​ಗೆ ವರ್ಗಾಯಿಸಲು ಹೈಕೋರ್ಟ್ ತೆಗೆದುಕೊಂಡಿರುವ ಕ್ರಮಗಳನ್ನು ಸುಪ್ರೀಂಕೋರ್ಟ್ ಗಮನಕ್ಕೆ ತರುವಂತೆ ರಿಜಿಸ್ಟ್ರಾರ್ ಜನರಲ್​ಗೆ ಸೂಚಿಸಿತು.
ತೀರ್ಪಿಗೆ ಬದ್ಧವಿರಬೇಕೆಂದಿದ್ದ ಹೈಕೋರ್ಟ್:ಆ.11ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಮಾಜಿ-ಹಾಲಿ ಸಂಸದರು ಮತ್ತು ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಆಯಾ ರಾಜ್ಯಗಳ ಹೈಕೋರ್ಟ್ ಅನುಮತಿ ಇಲ್ಲದೆ ಹಿಂಪಡೆಯು ವಂತಿಲ್ಲ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ರಾಜ್ಯ ಸರ್ಕಾರವೂ ಬದ್ಧವಾಗಿರಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿತ್ತು.
ಒಟಿಟಿಯಲ್ಲಿ ಬರಲಿದೆ ಪದ್ಮಶ್ರೀ ಪುರಸ್ಕೃತ ನಟಿ ಭಾರತಿ ವಿಷ್ಣುವರ್ಧನ್​ ಅವರ ‘ಬಾಳೆ ಬಂಗಾರ’

ಒಂದು ವರ್ಷದ ಆ ಮಗುವನ್ನು ಒಂದು ದಿನ ಭೇಟಿ ಮಾಡುವೆ ಅಂದ್ರು ನಟಿ ರಶ್ಮಿಕಾ; ಅದಕ್ಕೆ ಕಾರಣ ಕೂಡ ‘ರಶ್ಮಿಕಾ’ನೇ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − seventeen =
Remember me
