ಬೆಂಗಳೂರು:ಕರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಕೃಷಿ ಉತ್ಪನ್ನಗಳ ಸಾಗಣೆ ಸಂದರ್ಭ ಟೋಲ್ ಶುಲ್ಕ ಪಾವತಿಯಿಂದ ವಿನಾಯಿತಿ ನೀಡುವ ಸಾಧ್ಯತೆ ಬಗ್ಗೆ ನಿರ್ಧಾರ ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಲಾಕ್​ಡೌನ್​ನಿಂದ ಸಾರ್ವಜನಿಕರಿಗೆ ಎದುರಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.
ನಿಯಮಗಳ ಪ್ರಕಾರ ರೈತರು ಟೋಲ್ ಶುಲ್ಕ ಪಾವತಿಸಲೇಬೇಕಿದ್ದು, ವಿನಾಯಿತಿ ನೀಡಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಕೇಂದ್ರ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪರ ವಕೀಲರು ವಿಚಾರಣೆ ವೇಳೆ ನ್ಯಾಯಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಕೃಷಿ ಉತ್ಪನ್ನಗಳಿಗೆ ಮೊದಲೇ ಕಡಿಮೆ ಬೆಲೆ ಸಿಗುತ್ತಿದೆ. ಇಂಥ ಸಂದರ್ಭದಲ್ಲಿ ರೈತರಿಗೆ ಫಸಲು ತೆಗೆಯಲು ಮಾಡಿರುವ ವೆಚ್ಚವೂ ಸಿಗುತ್ತಿಲ್ಲ. ಟೋಲ್ ಫ್ರೀ ಮಾಡಿದರೆ ರೈತರಿಗೆ ಕೃಷಿ, ತೋಟಗಾರಿಕಾ ಮತ್ತು ಡೈರಿ ಉತ್ಪನ್ನಗಳನ್ನು ಸಾಗಿಸಲು ನೆರವಾಗುತ್ತದೆ. ಆದ್ದರಿಂದ, ರೈತರಿಗೆ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಪಾವತಿಯಿಂದ ಸೀಮಿತ ಅವಧಿಗೆ ವಿನಾಯಿತಿ ನೀಡುವ ಬಗ್ಗೆ ನಿರ್ಧರಿಸಿ ಕೋರ್ಟ್​ಗೆ ತಿಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತು.
ಇದನ್ನೂ ಓದಿಹೊಂಗಸಂದ್ರದ ಡೆಲಿವರಿ ಹುಡುಗ ಕರೊನಾ ಸೂಪರ್‌ಸ್ಪ್ರೆಡರ್ ಆಗುವ ಆತಂಕ
ಸಭೆ ನಡೆಸಲು ಸೂಚನೆ
ಲಾಕ್​ಡೌನ್ ಅವಧಿಯಲ್ಲಿ ರಾಜ್ಯದ ರೈತರು ಎದುರಿಸುತ್ತಿರುವ ಸಂಕಷ್ಟದ ನಿವಾರಣೆಗೆ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಸಭೆಗಳನ್ನು ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಪರ ವಕೀಲರು ಮೈಸೂರಿನ ಈರುಳ್ಳಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ನ್ಯಾಯಪೀಠದ ಗಮನಕ್ಕೆ ತಂದಾಗ ಈ ಸೂಚನೆ ನೀಡಿತು.
ಆರೆಸ್ಸೆಸ್​ ಪರಿಹಾರ ಕಾರ್ಯದ ಬಗ್ಗೆ ಶಹೀನ್ ಭಾಗ್ ಮುಸ್ಲಿಮರು ಏನು ಹೇಳಿದ್ರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + two =
Remember me
