
ಬೆಂಗಳೂರು : ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ಒದಗಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಶುಕ್ರವಾರ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ಚುನಾವಣಾ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.ಇದೇ ವೇಳೆ ನನ್ನನ್ನು ಜಯಶಾಲಿಯನ್ನಾಗಿ ಘೋಷಿಸಬೇಕೆಂದು ಕೋರಿದ್ದ ಎ. ಮಂಜು ಮನವಿಯನ್ನು ಹೈಕೋರ್ಟ್ ತಳ್ಳಿಹಾಕಿದೆ. ಜತೆಗೆ, ಎ. ಮಂಜು ಸಹ ಚುನಾವಣಾ ಅಕ್ರಮ ಎಸಗಿರುವುದರಿಂದ ಅವರನ್ನು ವಿಜೇತರನ್ನಾಗಿ ಘೋಷಿಸಬಾರದು ಎಂದು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಅಂಗೀಕರಿಸಿದೆ.ಪ್ರಜ್ವಲ್ ರೇವಣ್ಣ ಅವರು ೨೦೧೯ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದರು. ಈ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಒದಗಿಸಲಾಗಿದೆ. ಹೀಗಾಗಿ ಸಂಸದರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಎ.ಮಂಜು ಹಾಗೂ ವಕೀಲ ಜಿ. ದೇವರಾಜೇಗೌಡ ಸಲ್ಲಿಸಿದ್ದ ಪ್ರತ್ಯೇಕ ಚುನಾವಣಾ ತರಕಾರು ಅರ್ಜಿಗಳನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ.ಅರ್ಜಿಗಳನ್ನು ನ್ಯಾಯಾಲಯ ಭಾಗಶ: ಮಾನ್ಯ ಮಾಡಿದೆ. ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿದ್ದ ಇಬ್ಬರೂ ಅರ್ಜಿದಾರರ ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್, ಪರಾಜಿತ ಅಭ್ಯರ್ಥಿಯನ್ನು ಚುನಾಯಿತ ಎಂದು ಘೋಷಿಸಬೇಕು ಎಂಬ ಮತ್ತೊಂದು ಮನವಿಯನ್ನು ತಳ್ಳಿ ಹಾಕಿದೆ. ಅದರಂತೆ, ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ತಮ್ಮನ್ನು ಚುನಾಯಿತರನ್ನಾಗಿ ಘೋಷಿಸುವಂತೆ ಕೋರಿ ಎ. ಮಂಜು ಸಲ್ಲಿಸಿದ್ದ ಅರ್ಜಿಯನ್ನು ಇದೇ ವೇಳೆ ಹೈಕೋರ್ಟ್ ವಜಾಗೊಳಿಸಿ ಆದೇಶ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − five =
Remember me
